ನವದೆಹಲಿ:16ನೇ ರಾಷ್ಟ್ರಪತಿ ಆಯ್ಕೆಗೆ ಮತದಾನ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಗಣ್ಯರು ಸಂಸತ್ತಿನಲ್ಲಿ ಮತದಾನ ಮಾಡಿದರು.
ಎನ್ಡಿಎ ಅಭ್ಯರ್ಥಿಯಾಗಿ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಕಣದಲ್ಲಿದ್ದರೆ, ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಸ್ಪರ್ಧಿಸಿದ್ದಾರೆ. ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಹೆಚ್ಚಿನ ಬೆಂಬಲ ಇರುವ ಕಾರಣ ಅವರು ಶೇ.65 ರಷ್ಟು ಮತ ಪಡೆದು ಜಯಗಳಿಸುವ ಸಾಧ್ಯತೆ ಇದೆ. ದೇಶಾದ್ಯಂತ ರಾಷ್ಟ್ರಪತಿ ಚುನಾವಣೆಗಾಗಿ ಆಯಾ ರಾಜ್ಯಗಳ ವಿಧಾನಸಭೆಯಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 10 ರಿಂದ ಆರಂಭವಾಗಿರುವ ಮತದಾನ ಸಂಜೆ 5 ಗಂಟೆಯವರೆಗೂ ನಡೆಯಲಿದೆ.