ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಭಾರತೀಯ ತಂಡದೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿ, ಕ್ರೀಡಾಪಟುಗಳನ್ನು ಪ್ರೇರೇಪಿಸಿದರು.
ಕಳೆದ ವರ್ಷ ಸಹ ಮೋದಿ ಟೋಕಿಯೋ 2020ರ ಒಲಿಂಪಿಕ್ಸ್ ಮತ್ತು ಟೋಕಿಯೋ 2020 ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದ ಭಾರತದ ಅಥ್ಲೀಟ್‌ಗಳ ತಂಡದೊಂದಿಗೆ ಸಂವಾದ ನಡೆಸಿದ್ದರು. ಅನೇಕ ಬಾರಿ ಮೋದಿಯವರು ವೈಯಕ್ತಿಕವಾಗಿ ಕ್ರೀಡಾಪಟುಗಳ ಯಶಸ್ಸು ಮತ್ತು ಪ್ರಾಮಾಣಿಕ ಪ್ರಯತ್ನಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ಅವರಲ್ಲಿ ಉತ್ಸಾಹ ಹೆಚ್ಚಿಸಿದ್ದಾರೆ. ಇದಲ್ಲದೇ, ಪದಕ ಗೆದ್ದು ದೇಶಕ್ಕೆ ಹಿಂದಿರುಗಿದ ನಂತರ ಸಹ ಪ್ರಧಾನಿ ಕ್ರೀಡಾಪಟುಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದರು.