ಕರ್ನಾಟಕ

karnataka

By ETV Bharat Karnataka Team

Published : Oct 3, 2023, 6:44 AM IST

ETV Bharat / bharat

ಅಮಾನುಷ..! ಪುಟ್ಟ ಬಾಲಕನನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಸ್ಥಳೀಯರು.. ವಿಡಿಯೋ ವೈರಲ್​

ಯದ್ದು. ಸ್ಥಳೀಯರು ಪುಟ್ಟ ಬಾಲಕನ ಮೇಲೆ ಕಳ್ಳತನ ಆರೋಪ ಮಾಡಿ, ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ, ಥಳಿಸಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಕಂಡು ಬಂದಿದೆ.

Firozabad Crime News  Child Tied with Pole  Firozabad Police  Firozabad Video Viral  ಪುಟ್ಟ ಬಾಲಕನನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ  ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಸ್ಥಳೀಯರು  ವಿಡಿಯೋ ವೈರಲ್​ ಪುಟ್ಟ ಬಾಲಕನ ಮೇಲೆ ಕಳ್ಳತನ ಆರೋಪ  ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆ  ಮೂವರನ್ನು ವಶಕ್ಕೆ ಪಡೆದ ಪೊಲೀಸರು  ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್  ಫಿರೋಜಾಬಾದ್ ಎಸ್ಪಿ ಎಚ್ಚರಿಕೆ
ವಿಡಿಯೋ ವೈರಲ್​

ಫಿರೋಜಾಬಾದ್, ಉತ್ತರಪ್ರದೇಶ: ಜಿಲ್ಲೆಯಲ್ಲಿ ನಡೆದ ಘಟನೆಯೊಂದು ಬೆಚ್ಚಿ ಬೀಳಿಸುತ್ತದೆ. ಆ ಘಟನೆಯ ವಿಡಿಯೋ ಕೂಡ ವೈರಲ್ ಆಗಿದೆ. ವಿಡಿಯೋ ಪ್ರಕಾರ ಈ ಘಟನೆ ಜಿಲ್ಲೆಯ ರಾಮ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ವಿಡಿಯೋದಲ್ಲಿ ಸ್ಥಳೀಯರು ಬಾಲಕನಿಗೆ ಘೋರ ಶಿಕ್ಷೆ ನೀಡುತ್ತಿರುವುದು ಕಂಡು ಬಂದಿದೆ. ಬಾಲಕನ ಮೇಲೆ ಕಳ್ಳತನ ಆರೋಪ ಮಾಡಿರುವ ಸ್ಥಳೀಯರು, ಆತನ ಬಟ್ಟೆ ಬಿಚ್ಚಿ ಬೆತ್ತಲೆಯಾಗಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ.

ಮೂವರನ್ನು ವಶಕ್ಕೆ ಪಡೆದ ಪೊಲೀಸರು: ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬಳಿಕ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಸದ್ಯ ವಶಕ್ಕೆ ಪಡೆದ ಮೂವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ನಗರ ಎಸ್ಪಿ ಸರ್ವೇಶ್ ಕುಮಾರ್ ಮಿಶ್ರಾ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್: ವೈರಲ್ ವಿಡಿಯೋದಲ್ಲಿ ಕಂಡುಬರುವ ಪ್ರಕಾರ ಕೆಲವರು ಮಗುವನ್ನು ಶಿಕ್ಷಿಸುತ್ತಿದ್ದಾರೆ. ಮೊದಲು ಬಾಲಕನನ್ನು ವಿವಸ್ತ್ರಗೊಳಿಸಿ ನಂತರ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ ಘಟನೆ ನಡೆಯುತ್ತಿರುವಾಗಲೇ ಮಗುವನ್ನು ಅಮಾನುಷವಾಗಿ ಥಳಿಸುತ್ತಿರುವ ದೃಶ್ಯವನ್ನು ಯಾರೋ ರಹಸ್ಯವಾಗಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಪೊಲೀಸರ ಪ್ರಕಾರ, ಈ ವಿಡಿಯೋ ಜಿಲ್ಲೆಯ ರಾಮಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ. ಅಲ್ಲಿ ಕೆಲವರು ಕಳ್ಳತನದ ಆರೋಪದ ಮೇಲೆ ಈ ಹುಡುಗನನ್ನು ಹಿಡಿದಿದ್ದರು ಎಂದು ಸ್ಪಷ್ಟಪಡಿಸಿದ್ದಾರೆ.

ಫಿರೋಜಾಬಾದ್ ಎಸ್ಪಿ ಎಚ್ಚರಿಕೆ: ವೈರಲ್ ವಿಡಿಯೋವನ್ನು ಪೊಲೀಸರು ಗಮನಕ್ಕೆ ತೆಗೆದುಕೊಂಡಿದ್ದಾರೆ. ವಿಡಿಯೋದಲ್ಲಿ ಕಂಡುಬರುವ ಬಾಲಕನ ಮೇಲೆ ಹಲ್ಲೆ ಮಾಡಿದ ಮೂವರು ಆರೋಪಿಗಳನ್ನು ಸಹ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ನಗರ ಎಸ್ಪಿ ಸರ್ವೇಶ್ ಕುಮಾರ್ ಮಿಶ್ರಾ ಇದು ಅತ್ಯಂತ ಗಂಭೀರವಾದ ವಿಚಾರ ಎನ್ನುತ್ತಾರೆ. ಈ ವೇಳೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸದ್ಯ ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮುಂದೆ ಯಾರಾದರೂ ಇಂತಹ ಘಟನೆ ಮರುಕಳಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್​ಪಿ ಸರ್ವೇಶ್​ ಕುಮಾರ್​ ಎಚ್ಚರಿಕೆ ನೀಡಿದ್ದಾರೆ.

ಓದಿ:ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣಮೃದಂಗ: 24 ಗಂಟೆಯಲ್ಲಿ 12 ಶಿಶುಗಳು ಸೇರಿ 24 ರೋಗಿಗಳ ಸಾವು

ABOUT THE AUTHOR

...view details