ಕರ್ನಾಟಕ

karnataka

ETV Bharat / bharat

ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡಿ 6ರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 12ರ ಬಾಲಕ! - 6ರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 12ರ ಬಾಲಕ

12 ವರ್ಷದ ಬಾಲಕ ಅಶ್ಲೀಲ ವಿಡಿಯೋಗಳನ್ನು ನೋಡಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ನಡೆದಿದೆ.

Porn Video  Rape news  Raisingh Nagar News  Sriganganagar News  Innocent girl rape  Minor raped  Juvenile Home  ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ  ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡಿ ಅತ್ಯಾಚಾರ  6ರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 12ರ ಬಾಲಕ  6ರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 12ರ ಬಾಲಕ ಸುದ್ದಿ
ಸಂಗ್ರಹ ಚಿತ್ರ

By

Published : Mar 20, 2021, 7:46 AM IST

ಶ್ರೀಗಂಗಾನಗರ: ಆಂಡ್ರಾಯ್ಡ್ ಫೋನ್‌ಗಳನ್ನು ಬಳಸಲು ತಮ್ಮ ಅಪ್ರಾಪ್ತ ಮಕ್ಕಳಿಗೆ ನೀಡುವ ಅಥವಾ ನೀಡಿದ ಪೋಷಕರಿಗೆ ಈ ಘಟನೆಯೊಂದು ಶಾಕಿಂಗ್​ ಆಗಿದೆ.

ಮೊಬೈಲ್ ಫೋನ್ ಮೂಲಕ ಅಶ್ಲೀಲ ವೀಡಿಯೊಗಳನ್ನು ನೋಡುವ ಮೂಲಕ 12 ವರ್ಷದ ಬಾಲಕನೊಬ್ಬ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಶ್ರೀಗಂಗನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಸುಮಾರು ನಾಲ್ಕೈದು ದಿನಗಳ ಹಿಂದೆ 6 ವರ್ಷದ ಮುಗ್ಧ ಬಾಲಕಿಯ ಮೇಲೆ 12 ವರ್ಷದ ಬಾಲಕ ಅತ್ಯಾಚಾರ ಎಸಗಿದ್ದಾನೆ. ಈ ಘಟನೆ ಕುಟುಂಬಸ್ಥರಿಗೆ ತಿಳಿದಿದೆ. ಬಳಿಕ ಬಾಲಕಿ ಕುಟುಂಬಸ್ಥರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ, ಅಶ್ಲೀಲ ವಿಡಿಯೋಗಳನ್ನು ನೋಡುವ ಮೂಲಕ ಅತ್ಯಾಚಾರ ಎಸಗಿದ್ದೇನೆ ಎಂದು ತನಿಖಾ ಅಧಿಕಾರಿ ವಿರುದ್ಧ ತಪ್ಪೊಪ್ಪಿಕೊಂಡಿದ್ದಾನೆ.

ಬಾಲಕನ ವಿಚಾರಣೆ ಬಳಿಕ ಬಾಲಕನನ್ನು ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇಡೀ ಪ್ರಕರಣವನ್ನು ಆಲಿಸಿದ ಬಾಲಾಪರಾಧಿ ನ್ಯಾಯಾಲಯ ಬಾಲಕನನ್ನು ಬಾಲಾಪರಾಧಿ ಮನೆಗೆ ಕಳುಹಿಸಿತು.

ಬಾಲಕ ಒಬ್ಬಂಟಿಯಾಗಿ ಅಶ್ಲೀಲ ವಿಡಿಯೋಗಳನ್ನು ನೋಡುವ ಮೂಲಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪೋಷಕರು ತಮ್ಮ ಮಕ್ಕಳಿಗೆ ಮೊಬೈಲ್ ನೀಡುವ ಜೊತೆಗೆ ಸಂಪೂರ್ಣ ನಿಗಾ ವಹಿಸಬೇಕೆಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

ABOUT THE AUTHOR

...view details