ಕರ್ನಾಟಕ

karnataka

ETV Bharat / bharat

ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಅ.8ರಿಂದ ವರ್ಕ್​ ಫ್ರಮ್​ ಹೋಮ್ - ರಾಜ್ಯ ಸರ್ಕಾರದ ಇ ಕಚೇರಿ ಸರ್ವರ್

ಪಶ್ಚಿಮ ಬಂಗಾಳದಲ್ಲಿ ಅಕ್ಟೋಬರ್ 8 ರಿಂದ ರಾಜ್ಯ ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡಲು ಪ್ರಾರಂಭಿಸುತ್ತಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ತಿಳಿಸಿದೆ.

ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

By

Published : Oct 6, 2022, 11:04 PM IST

Updated : Oct 7, 2022, 11:09 AM IST

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಅಕ್ಟೋಬರ್ 8 ರಿಂದ ರಾಜ್ಯ ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡಲು ಪ್ರಾರಂಭಿಸುತ್ತಾರೆ ಎಂದು ರಾಜ್ಯ ಸಚಿವಾಲಯ ತಿಳಿಸಿದೆ. ಪಶ್ಚಿಮ ಬಂಗಾಳದ ಸರ್ಕಾರಿ ನೌಕರರಿಗೆ ಅಕ್ಟೋಬರ್ 11 ರವರೆಗೆ ರಜೆಯ ಅವಧಿಯನ್ನು ಸೂಚಿಸಿ ಆದೇಶಿಲಾಗಿತ್ತು.

ಸರ್ವರ್ ನಿರ್ವಹಣೆಯಿಂದಾಗಿ ಅಕ್ಟೋಬರ್ 2 ರಿಂದ 7 ರ ನಡುವೆ ನಿಷ್ಕ್ರಿಯವಾಗಿರುವ ರಾಜ್ಯ ಸರ್ಕಾರದ ಇ ಕಚೇರಿ ಸರ್ವರ್ ಈ ತಿಂಗಳ ಎಂಟನೇ ತಾರೀಖಿನಿಂದ ಪ್ರಾರಂಭವಾಗಲಿದೆ ಮತ್ತು ಅಧಿಕಾರಿಗಳು ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ರಾಜ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

ರಾಜ್ಯ ಆಡಳಿತ ನೌಕರರಿಗೆ ಕಚೇರಿಯಲ್ಲಿ ಕೆಲಸ ಮಾಡದಂತೆ ಅವಕಾಶವನ್ನು ಒದಗಿಸಲಾಗುತ್ತದೆ. ನೌಕರರಿಂದ ವೇಗದ ಕೆಲಸ ನಿರೀಕ್ಷಿಸಲಾಗಿದೆ ಎಂದು ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.

ಓದಿ:ಪ್ರಾಣಿ ಪ್ರಿಯರಿಗೆ ಗುಡ್​ ನ್ಯೂಸ್​: ಸಾಕುಪ್ರಾಣಿಗಳೊಂದಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿದ ಆಕಾಶ್​ಏರ್​​

Last Updated : Oct 7, 2022, 11:09 AM IST

ABOUT THE AUTHOR

...view details