ಪೃಥ್ವಿಪುರ್(ಮಧ್ಯಪ್ರದೇಶ): 'ಜನದರ್ಶನ ಯಾತ್ರೆ'ಯಲ್ಲಿ ಭಾಗಿಯಾಗಿದ್ದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕಾಂಗ್ರೆಸ್ ಪಕ್ಷ ಮುಳುಗಿಸಲು ರಾಹುಲ್ ಗಾಂಧಿ ಮಾತ್ರ ಸಾಕು ಎಂದಿದ್ದಾರೆ.
ರಾಹುಲ್ ಗಾಂಧಿ ಏಕಾಂಗಿಯಾಗಿ ಕಾಂಗ್ರೆಸ್ ಪಕ್ಷವನ್ನು ಮುಳುಗಿಸುತ್ತಿದ್ದಾರೆ. ಪಂಜಾಬ್ ಕಾಂಗ್ರೆಸ್ನಲ್ಲಿ ಬಿರುಗಾಳಿ ಎಬ್ಬಿಸಿರುವ ಅವರು, ನವಜೋತ್ ಸಿಂಗ್ ಸಿಧುಗೋಸ್ಕರ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ತೆಗೆದು ಹಾಕಿದರು. ಇದೀಗ ಸಿಧು ಖುದ್ದಾಗಿ ಓಡಿಹೋಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಹುಲ್ ಗಾಂಧಿ ಇರುವವರೆಗೂ ನಾವು ಏನನ್ನೂ ಮಾಡಬೇಕಾಗಿಲ್ಲ ಎಂದು ಟೀಕಿಸಿದರು.