ಲೇಹ್(ಲಡಾಖ್):ಚೀನಾದ ಪಡೆಗಳು ಪೂರ್ವ ಲಡಾಖ್ ಮತ್ತು ನಾರ್ದರ್ನ್ ಫ್ರಂಟ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆ ಆಗುತ್ತಿವೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಆತಂಕ ವ್ಯಕ್ತಪಡಿಸಿದ್ದಾರೆ.
ಮಹಾತ್ಮ ಗಾಂಧಿ ಅವರ 152ನೇ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಲೇಹ್ ಟೌನ್ನಲ್ಲಿ ವಿಶ್ವದ ಅತಿ ದೊಡ್ಡ ರಾಷ್ಟ್ರ ಧ್ವಜವನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಗಡಿಯಲ್ಲಿ ಚೀನಾ ಹೆಚ್ಚಾಗಿ ಸೇನೆ ನಿಯೋಜಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಇದರ ಜೊತೆಗೆ ಭಯೋತ್ಪಾದನಾ ಸಂಬಂಧಿ ಚಟುವಟಿಕೆಗಳಿಗೆ ಪಾಕಿಸ್ತಾನ ಬೆಂಬಲ ನೀಡಬಾರದು ಎಂದಿರುವ ನರವಾಣೆ, ಈ ಕುರಿತು ಪ್ರತಿ ವಾರ ಮಾತುಕತೆಗಳನ್ನು ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.