ಅಮೃತಸರ (ಪಂಜಾಬ್): ಅಮೃತಸರ ಪೊಲೀಸರು ಹಾಗೂ ಗಡಿ ಭದ್ರತಾ ಪಡೆ (ಬಿಎಸ್ಎಫ್) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಂಜಾಬ್ನ ಭಾರತ-ಪಾಕಿಸ್ತಾನ ಗಡಿಯಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಒಂದು 1 ಎಕೆ 47 ರೈಫಲ್, ಒಂದು ಎಕೆ 56 ರೈಫಲ್, ಚೀನಾ ಪಿಸ್ತೂಲ್, 21 ಜೀವಂತ ಗುಂಡುಗಳು ಸೇರಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.