ನವದೆಹಲಿ:ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಸೇರಿದಂತೆ ರೈತರ ಇನ್ನಿತರ ಬೇಡಿಕೆಗಳ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯದ ಹೊರತು ನಾವು ಪ್ರತಿಭಟನಾ ಸ್ಥಳದಿಂದ ಕದಲುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಲೋಕಸಭೆಯಲ್ಲಿ ಕೃಷಿ ಕಾಯ್ದೆ ರದ್ದು ಮಸೂದೆ ಅಂಗೀಕಾರವಾದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರೈತರ ಪ್ರಮುಖ ಬೇಡಿಕೆಯಾದ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಬಗ್ಗೆ ಸರ್ಕಾರ ಕಾನೂನು ತರಬೇಕು. ಅಲ್ಲದೇ, ರೈತ ಹೋರಾಟದಲ್ಲಿ ಮೃತಪಟ್ಟ 750 ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವ ಕುರಿತು ಸರ್ಕಾರ ಅಧಿವೇಶನದಲ್ಲಿ ಚರ್ಚಿಸಬೇಕು. ಈ ಎಲ್ಲಾ ವಿಷಯಗಳು ಇತ್ಯರ್ಥ ಕಾಣದ ಹೊರತು ನಾವು ಪ್ರತಿಭಟನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದರು.