ಕರ್ನಾಟಕ

karnataka

ETV Bharat / bharat

ಬಂಗಾಳ 2ನೇ ಹಂತದ ವಿಧಾನಸಭೆ ಚುನಾವಣೆ: ಇಲ್ಲಿವರೆಗಿನ ಪ್ರಮುಖ ಬೆಳವಣಿಗೆ ಇಲ್ಲಿದೆ.. - Mamata Banerjee

ಬಿಜೆಪಿ ಅಭ್ಯರ್ಥಿ ಕಾರಿನ ಮೇಲೆ ದಾಳಿ, ಟಿಎಂಸಿ-ಬಿಜೆಪಿ ಕಾರ್ಯಕರ್ತರ ಸಾವು, ಚುನಾವಣಾ ಆಯೋಗಕ್ಕೆ ಡೆರೆಕ್ ಒ'ಬ್ರಿಯೆನ್ ಪತ್ರ ಸೇರಿದಂತೆ ಇಂದಿನ ಬಂಗಾಳ 2ನೇ ಹಂತದ ವಿಧಾನಸಭೆ ಚುನಾವಣೆಯ ಪ್ರಮುಖ ಅಂಶಗಳು ಹೀಗಿವೆ..

West Bengal Assembly Polls
ಬಂಗಾಳ 2ನೇ ಹಂತದ ವಿಧಾನಸಭೆ ಚುನಾವಣೆ

By

Published : Apr 1, 2021, 4:08 PM IST

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಒಟ್ಟು 294 ವಿಧಾನಸಭೆ ಕ್ಷೇತ್ರಗಳಿಗೆ ಎಂಟು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮಾರ್ಚ್​ 27ರಂದು ಮೊದಲ ಹಂತದ ಚುನಾವಣೆ ನಡೆದಿದ್ದು, ಇಂದು ಪಶ್ಚಿಮ ಮೇದಿನಿಪುರ, ಪೂರ್ವ ಮೇದಿನಿಪುರ, ಬಂಕುರಾ, ದಕ್ಷಿಣ 24 ಪರಗಣ ಜಿಲ್ಲೆಗಳ ಒಟ್ಟು 30 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯುತ್ತಿದೆ.

ಇಂದಿನ 2ನೇ ಹಂತದ ಬಂಗಾಳ ಚುನಾವಣೆಯ ಪ್ರಮುಖ ಅಂಶಗಳು ಹೀಗಿವೆ:

  • ಹೈ ವೋಲ್ಟೇಜ್ ಕ್ಷೇತ್ರವಾಗಿರುವ 'ನಂದಿಗ್ರಾಮ'ದಲ್ಲೂ ಇಂದು ಮತದಾನ ನಡೆಯುತ್ತಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್​ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಟಿಎಂಸಿಗೆ ಕೈಕೊಟ್ಟು ಬಿಜೆಪಿ ಸೇರ್ಪಡೆಗೊಂಡಿದ್ದ ಸುವೆಂದು ಅಧಿಕಾರಿ ನಂದಿಗ್ರಾಮದಿಂದ ಸ್ಪರ್ಧಿಸುತ್ತಿದ್ದಾರೆ. ನಂದಿಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಜನರು ಶೇ.30 ರಷ್ಟಿದ್ದಾರೆ.
  • ಕೇಶಪುರದಲ್ಲಿ ಬಿಜೆಪಿ ಅಭ್ಯರ್ಥಿ ತನ್ಮಯ್​ ಘೋಷ್​ ಅವರ ಕಾರಿಗೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದು, ಮತಗಟ್ಟೆ ಏಜೆಂಟ್​ ಅನ್ನು ಥಳಿಸಲಾಗಿತ್ತು. ಟಿಎಂಸಿ ಗೂಂಡಾಗಳು ಕೃತ್ಯ ಎಸಗಿದೆ ಎಂದು ಬಿಜೆಪಿ ಆರೋಪಿಸಿದೆ. ಘಟನೆ ಬಳಿಕ ಕೇಶಪುರದಲ್ಲಿ ಬಿಗಿ ಪೊಲೀಸ್​ ಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ: ನಂದಿಗ್ರಾಮ: ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

  • ನಂದಿಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಇವಿಎಂ ಅನ್ನು ನಿಯಂತ್ರಿಸಲು ವೋಟಿಂಗ್​ ಬೂತ್​ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಟಿಎಂಸಿ ಸಂಸದ ಡೆರೆಕ್ ಒ'ಬ್ರಿಯೆನ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
  • ನಂದಿಗ್ರಾಮದಲ್ಲಿ ಇಂದು ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದ್ದರೆ, ಕೇಶಪುರದಲ್ಲಿ ಟಿಎಂಸಿ ಕಾರ್ಯಕರ್ತನೊಬ್ಬನ ಕೊಲೆಯಾಗಿದೆ.
  • ಸಿಎಂ ಮಮತಾ ಬ್ಯಾನರ್ಜಿ ಅವರು ನಾಮಪತ್ರ ಸಲ್ಲಿಸಿದ ದಿನವೇ ನಂದಿಗ್ರಾಮದಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆದ ಬಳಿಕ ವ್ಹೀಲ್​ಚೇರ್​ನಲ್ಲಿ ಕುಳಿತೇ ರೋಡ್​ ಶೋ, ಪ್ರಚಾರ ನಡೆಸುತ್ತಿದ್ದಾರೆ. ಇಂದು ಕೂಡ ಗಾಲಿಕುರ್ಚಿಯಲ್ಲಿ ಕುಳಿತು ನಂದಿಗ್ರಾಮದ ವಿವಿಧ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: 3 ಗಂಟೆಯವರೆಗೆ ಬಂಗಾಳದಲ್ಲಿ ಶೇ.71.07, ಅಸ್ಸೋಂನಲ್ಲಿ ಶೇ.63.03ರಷ್ಟು ಮತದಾನ

  • ಬೆಳಗ್ಗೆ 7ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಬಂಗಾಳದಲ್ಲಿ ಶೇ.71.07ರಷ್ಟು ಮತದಾನವಾಗಿದೆ.
  • ರಾಜ್ಯದಲ್ಲಿ 10,620 ಬೂತ್‌ಗಳನ್ನು 'ಸೂಕ್ಷ್ಮ' ಮತಗಟ್ಟೆಗಳೆಂದು ಚುನಾವಣಾ ಆಯೋಗ ಘೋಷಿಸಿದ್ದು, ಒಟ್ಟು 651 ಕೇಂದ್ರ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎಫ್​)ಯನ್ನು ನಿಯೋಜಿಸಿದೆ. ಜಿದ್ದಾಜಿದ್ದಿ ಕ್ಷೇತ್ರವಾಗಿರುವ ನಂದಿಗ್ರಾಮಕ್ಕೆ 22 ಸಿಆರ್​ಪಿಎಫ್ ತಂಡವನ್ನು ನಿಯೋಜನೆ ಮಾಡಲಾಗಿದೆ.
  • ಮತಗಟ್ಟೆಗಳ ಮೇಲೆ ಕಣ್ಣಿಡಲು ಡ್ರೋನ್‌ಗಳು ಮತ್ತು ಹೆಲಿಕಾಪ್ಟರ್‌ಗಳ ಮೂಲಕ ವೈಮಾನಿಕ ಸಮೀಕ್ಷೆ ನಡೆಸಲಾಗುತ್ತಿದೆ.

ABOUT THE AUTHOR

...view details