ಕೋಲ್ಕತ್ತಾ(ಪಶ್ಚಿಮಬಂಗಾಳ) :ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷ, ಸಂಸದ ಅರ್ಜುನ್ ಸಿಂಗ್ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ)ಗೆ ಸೇರಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ರಾಜ್ಯ ನಾಯಕತ್ವವನ್ನು ಅವರು ಟೀಕಿಸಿದ್ದ ಕೆಲವೇ ದಿನಗಳಲ್ಲಿ ಈ ಮಾತುಗಳು ಕೇಳಿ ಬರುತ್ತಿವೆ.
ಪಕ್ಷದಲ್ಲಿ ಉನ್ನತ ಸ್ಥಾನ ಹೊಂದಿದ್ದರೂ ತಮಗೆ ಕೆಲಸ ಮಾಡಲು ಸರಿಯಾಗಿ ಅವಕಾಶ ನೀಡುತ್ತಿಲ್ಲ ಎಂದು ಅರ್ಜುನ್ ಸಿಂಗ್ ಹೇಳಿಕೊಂಡಿದ್ದರು. ಅಲ್ಲದೇ, ಪ್ರತಿ ಕ್ವಿಂಟಾಲ್ ಸೆಣಬಿನ ಬೆಲೆಯನ್ನು 6,500 ರೂ.ಗೆ ಮಿತಿಗೊಳಿಸುವ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಳ್ಳುವ ನಿರ್ಧಾರ ಬಗ್ಗೆಯೂ ಅವರು ಅತೃಪ್ತಿ ಹೊಂದಿದ್ದರು.
ನಾನು ಇತ್ತೀಚೆಗೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಪಕ್ಷದ ರಾಜ್ಯ ಘಟಕದ ಪರಿಸ್ಥಿತಿಯ ಬಗ್ಗೆ ಹೇಳಿದ್ದೇನೆ. ಪಕ್ಷದಲ್ಲಿ ಅರ್ಹ ಕಾರ್ಯಕರ್ತರಿಗೆ ಸರಿಯಾದ ಮನ್ನಣೆ ಸಿಗುತ್ತಿಲ್ಲ. ರಾಜ್ಯ ಉಪಾಧ್ಯಕ್ಷನಾಗಿರುವ ನನಗೂ ಸರಿಯಾಗಿ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಸಿಂಗ್ ಇತ್ತೀಚಿಗೆ ಹೇಳಿದ್ದರು.