ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದರು. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ನವದೆಹಲಿಯ ಅಧಿಕೃತ ನಿವಾಸದಲ್ಲಿ ಈ ಸಭೆ ನಡೆದಿದೆ.
ಈ ವರ್ಷದ ಆರಂಭದಲ್ಲಿ ನಡೆದ ಗೋವಾ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಹಣಾಹಣಿ ನಡೆಸಿದ್ದವು. ಗೋವಾ ಚುನಾವಣೆಯಲ್ಲಿ TMC ಯಾವುದೇ ಸ್ಥಾನ ಪಡೆಯುವಲ್ಲಿ ವಿಫಲವಾಗಿತ್ತು. ಆದರೆ, APP ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಜಸ್ಟೀಸ್ ಕಾನ್ಕ್ಲೇವ್ನಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೆಹಲಿಯಲ್ಲಿದ್ದಾರೆ. ಇತರ ರಾಜ್ಯಗಳ ಮುಖ್ಯಮಂತ್ರಿಗಳು ಹೈಕೋರ್ಟ್ ಸಿಜೆಗಳು ಹಾಗೂ ಸಿಎಂಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.