ನವದೆಹಲಿ:ಮೂರು ದಿನಗಳ ದೆಹಲಿ ಪ್ರವಾಸ ಕೈಗೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಈ ವೇಳೆ ಕೊವಿಡ್ ವ್ಯಾಕ್ಸಿನ್ ಸೇರಿದಂತೆ ಅನೇಕ ವಿಷಯ ಬಗ್ಗೆ ಚರ್ಚೆ ಮಾಡಿರುವುದಾಗಿ ತಿಳಿದು ಬಂದಿದೆ.
ರಾಜ್ಯದ ಹೆಸರು ಬದಲಾವಣೆಗೆ ದೀದಿ ಮನವಿ
ನವದೆಹಲಿಯ 7 ಲೋಕಕಲ್ಯಾಣ ಮಾರ್ಗ ನಿವಾಸದಲ್ಲಿ ಪ್ರಧಾನಿ ಭೇಟಿ ಮಾಡಿರುವ ಮಮತಾ, ಪಶ್ಚಿಮ ಬಂಗಾಳಕ್ಕೆ ಹೆಚ್ಚಿನ ಕೊರೊನಾ ವ್ಯಾಕ್ಸಿನ್ ಡೋಸ್ ನೀಡಬೇಕು. ರಾಜ್ಯದಲ್ಲಿನ ವಿವಿಧ ಯೋಜನೆಗಳಿಗೆ ಒಪ್ಪಿಗೆ ನೀಡಬೇಕು. ಇದರ ಜೊತೆಗೆ ರಾಜ್ಯದ ಹೆಸರು ಬದಲಾವಣೆ ಮಾಡುವ ವಿಷಯವಾಗಿಯೂ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಈಗಾಗಲೇ ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ಭೇಟಿ ಮಾಡಿರುವ ಮಮತಾ ಬ್ಯಾನರ್ಜಿ, ನಾಳೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಹಾಗೂ ಟಿಎಂಸಿ ಸಂಸದರೊಂದಿಗೆ ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ. ಇದರ ಜೊತೆಗೆ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೂ ಮಾತುಕತೆ ನಡೆಸುವ ಸಾಧ್ಯತೆ ಇದೆ.