ಕೋಲ್ಕತ್ತಾ( ಪಶ್ಚಿಮ ಬಂಗಾಳ): ಪಡಿತರ ವಿತರಣೆಯಲ್ಲಿ ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಸಚಿವೆ ಜ್ಯೋತಿಪ್ರಿಯ ಮಲ್ಲಿಕ್ ಅವರನ್ನು ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ, ಇಡಿ ಬಂಧನದ ಕುರಿತು ಮಾತನಾಡಿರುವ ಸಚಿವ ಜ್ಯೋತಿಪ್ರಿಯ ಮಲಿಕ್ "ನಾನು ಪಿತೂರಿಯ ಬಲಿಪಶು." ಎಂದು ಹೇಳಿದ್ದಾರೆ.
ಭ್ರಷ್ಟಾಚಾರ ಆರೋಪ ಮೇಲೆ ಸಚಿವ ಜ್ಯೋತಿಪ್ರಿಯಾ ಮಲಿಕ್ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದರು. ಗುರುವಾರ ಬೆಳಗ್ಗೆ ಏಕಾಏಕಿ ಕೇಂದ್ರ ಭದ್ರತಾ ಪಡೆಗಳೊಂದಿಗೆ ಸಚಿವರ ಲೇಕ್ ಸಾಲ್ಟ್ನಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಶೋಧ ಕಾರ್ಯ ನಡೆಸಿದ್ದಾರೆ. ಬೆಳಗ್ಗೆಯಿಂದ ಸತತ ವಿಚಾರಣೆ ತಪಾಸಣೆ ನಡೆಸಿದ್ದ ಇಡಿ ಅಧಿಕಾರಿಗಳು, ಅಂತಿಮವಾಗಿ ಈ ಪ್ರಕರಣದಲ್ಲಿ ಮಾಜಿ ಆಹಾರ ಖಾತೆ ಸಚಿವ ಹಾಲಿ ಅರಣ್ಯ ಸಚಿವ ಮಲಿಕ್ ಅವರನ್ನು ಬಂಧಿಸಿದೆ. ನಿನ್ನೆ ಇಡಿ ದಾಳಿ ವೇಳೆ ಸಚಿವ ಜ್ಯೋತಿಪ್ರಿಯ ಮಲಿಕ್ ಅವರು ಮನೆಯಲ್ಲೇ ಇದ್ದರು.
ನಿನ್ನೆ (ಗುರುವಾರ) ಬೆಳಗ್ಗೆಯಿಂದಲೇ ಇಡಿ ಅಧಿಕಾರಿಗಳು ಸಚಿವರ ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದರು. ಇಡಿ ಮಾಹಿತಿ ಪ್ರಕಾರ, ಪಡಿತರ ವಿತರಣೆಯಲ್ಲಿ ಭ್ರಷ್ಟಾಚಾರ ಎಸಗಿರುವ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಪ್ರಕರಣ ಸಂಬಂಧ ಈ ಹಿಂದೆ ಬಾಕಿಬುರ್ ರೆಹಮಾನ್ ಅವರನ್ನು ಇಡಿ ಬಂಧಿಸಿತ್ತು. ರೆಹಮಾನ್ ವಿಚಾರಣೆ ವೇಳೆ ಸಚಿವ ಜ್ಯೋತಿಪ್ರಿಯ ಮಲಿಕ್ ಹೆಸರು ಕೇಳಿಬಂದಿತ್ತು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಇಡಿ ಅಧಿಕಾರಿಗೆ ಸಚಿವರ ಮನೆ ಮೇಲೆ ದಾಳಿ ನಡೆಸಿದ್ದರು. ಸಾಲ್ಟ್ ಲೇಕ್ನ ಬಿ ಬ್ಲಾಕ್ನಲ್ಲಿರುವ ಸಚಿವರ ಎರಡು ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಲಾಗಿತ್ತು.