ನವದೆಹಲಿ:ಇಬ್ಬರು ಕಾರ್ಯಕಾರಿ ಅಧ್ಯಕ್ಷರೊಂದಿಗೆ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಮುಖ್ಯಸ್ಥರನ್ನು ನೇಮಿಸುವ ಸೂತ್ರವನ್ನು ಕಾಂಗ್ರೆಸ್ ಹೈಕಮಾಂಡ್ ಹೆಣೆದಿದೆ ಎಂದು ಮೂಲಗಳು ತಿಳಿಸಿವೆ.
ನವಜೋತ್ ಸಿಂಗ್ ಸಿಧು ಈ ಹುದ್ದೆಗೆ ಮುಂಚೂಣಿಯಲ್ಲಿರುವವರಲ್ಲಿ ಒಬ್ಬರಾಗಿದ್ದರೆ, ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಜಾತಿ ಮತ್ತು ಸಮುದಾಯದ ವಿಷಯದಲ್ಲಿ ಸಮತೋಲನ ಕಾಪಾಡಿಕೊಳ್ಳಲು ಹೈಕಮಾಂಡ್ ಈ ಸೂತ್ರಕ್ಕೆ ಮೊರೆ ಹೋಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಮುಂದಿನ 2-3 ದಿನಗಳಲ್ಲಿ ಪಂಜಾಬ್ ಕಾಂಗ್ರೆಸ್ನಲ್ಲಿ ಅಮೂಲಾಗ್ರ ಬದಲಾವಣೆ ಮಾಡಲು ಪಕ್ಷ ಮುಂದಾಗಿದೆ. ಆದರೆ, ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.