ಕರ್ನಾಟಕ

karnataka

ETV Bharat / bharat

ಬಿಜೆಪಿ ಅಧಿಕಾರಕ್ಕೆ ಬಂದರೆ ಹೆಣ್ಣು ಮಗುವಿನ ಖಾತೆಗೆ 1 ಲಕ್ಷ ರೂಪಾಯಿ: ಖುಷ್ಬು ಸುಂದರ್ - ಥೌಸಂಡ್ ಲೈಟ್ಸ್​ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಖುಷ್ಬು ಸುಂದರ್

ಬಿಜೆಪಿ ಅಧಿಕಾರಕ್ಕೆ ಬಂದರೆ ಜನಿಸುವ ಪ್ರತಿ ಹೆಣ್ಣು ಮಗುವಿನ ಖಾತೆಗೆ 1 ಲಕ್ಷ ರೂ. ಜಮಾ ಮಾಡುತ್ತೇವೆ. ಇದು ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಹಕಾರಿಯಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಖುಷ್ಬು ಸುಂದರ್ ಹೇಳಿದ್ದಾರೆ.

BJP's Khushbu Sundar
ಬಿಜೆಪಿ ಅಭ್ಯರ್ಥಿ ಖುಷ್ಬು ಸುಂದರ್

By

Published : Mar 28, 2021, 9:10 AM IST

ಚೆನೈ (ತಮಿಳುನಾಡು):ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿ ಹೆಣ್ಣು ಮಗುವಿನ ಖಾತೆಗೆ 1 ಲಕ್ಷ ರೂ. ಹಾಕುವುದಾಗಿ ಥೌಸಂಡ್ ಲೈಟ್ಸ್​ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಖುಷ್ಬು ಸುಂದರ್ ಭರವಸೆ ನೀಡಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಎಲ್ಲಾ ಪಕ್ಷದ ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಖುಷ್ಬು ಸುಂದರ್, ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗಿರುವುದು ಬಹಳ ಮುಖ್ಯ. ಹೀಗಾಗಿ, ಬಿಜೆಪಿ ಅಧಿಕಾರಕ್ಕೆ ಬಂದರೆ ಜನಿಸುವ ಪ್ರತಿ ಹೆಣ್ಣು ಮಗುವಿನ ಖಾತೆಗೆ 1 ಲಕ್ಷ ರೂ. ಜಮಾ ಮಾಡುತ್ತೇವೆ. ಇದರಿಂದಾಗಿ ಹೆಣ್ಣುಮಗುವಿನ ಪೋಷಣೆಗೆ ಅನುಕೂಲವಾಗುತ್ತದೆ ಜೊತೆಗೆ ಹೆಣ್ಣು ಭ್ರೂಣ ಹತ್ಯೆ ತಡೆಯಲು ಇದು ಸಹಕಾರಿಯಾಗುತ್ತದೆ ಎಂದರು.

ಏಪ್ರಿಲ್ 6ರಂದು ತಮಿಳುನಾಡು ವಿಧಾನಸಭಾ ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 2ರಂದು ಮತ ಎಣಿಕೆ ನಡೆಯಲಿದೆ. ರಾಜ್ಯದ 234 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಕಾಂಗ್ರೆಸ್-ಡಿಎಂಕೆ ಮತ್ತು ಬಿಜೆಪಿ-ಎಐಎಡಿಎಂಕೆ ಮೈತ್ರಿ ಕೂಟಗಳು ಪರಸ್ಪರ ವಿರುದ್ಧವಾಗಿ ಸ್ಪರ್ಧಿಸುತ್ತಿವೆ.

ಓದಿ:ನಿಲ್ಲಿಸಿದ್ದ ಲಾರಿಗೆ ಟೆಂಪೋ ಟ್ರಾವೆಲರ್​ ಡಿಕ್ಕಿ: ಐವರು ಮಹಿಳೆಯರು ಸೇರಿ 8 ಯಾತ್ರಾರ್ಥಿಗಳು ದುರ್ಮರಣ

ABOUT THE AUTHOR

...view details