ಕೋಲ್ಕತ್ತಾ (ಪ.ಬಂ): ರಾಜ್ಯದಲ್ಲಿ ಯಾಸ್ ಚಂಡಮಾರುತ ಉಂಟು ಮಾಡಿರುವ ಹಾನಿಯ ಕುರಿತಂತೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡ ಸಂದರ್ಭ ಅವರ ಜೊತೆ ಸಭೆ ನಡೆಸಲಿದ್ದೇವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ನಾಳೆ ಪ್ರಧಾನಿ ಮೋದಿ ಜೊತೆ ಯಾಸ್ ಚಂಡಮಾರುತ ಪರಿಶೀಲನಾ ಸಭೆ: ಸಿಎಂ ಮಮತಾ ಬ್ಯಾನರ್ಜಿ - ಯಾಸ್ ಚಂಡಮಾರುತ
ನಾಳೆ ಪ್ರಧಾನಿ ಮೋದಿ ಯಾಸ್ ಚಂಡಮಾರುತದಿಂದ ಹಾನಿಗೀಡಾದ ಪ್ರದೇಶಗಳ ಪರಿಸ್ಥಿತಿ ಅವಲೋಕಿಸಲು ಪ್ರವಾಸ ಕೈಗೊಳ್ಳಲಿದ್ದಾರೆ. ಇದೇ ವೇಳೆ ಪಶ್ಚಿಮ ಬಂಗಾಳಕ್ಕೂ ಭೇಟಿ ನೀಡಲಿದ್ದು, ಪರಿಶೀಲನಾ ಸಭೆ ನಡೆಸಲಿದ್ದಾರೆ.
ಮಮತಾ ಬ್ಯಾನರ್ಜಿ ಮೋದಿ
ಈ ಕುರಿತು ಮದಿನಿಪುರ ಜಿಲ್ಲೆಯ ಕಲೈಕುಂಡದಲ್ಲಿ ಶುಕ್ರವಾರ ಸಭೆ ನಡೆಯಲಿದೆ ಎಂದು ಬ್ಯಾನರ್ಜಿ ತಿಳಿಸಿದ್ದಾರೆ. ಒಡಿಶಾದಲ್ಲಿ ಚಂಡಮಾರುತ ಪೀಡಿತ ಪ್ರದೇಶದ ಸಮೀಕ್ಷೆ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇಲ್ಲಿಗೆ ಆಗಮಿಸಲಿದ್ದಾರೆ. ದಿಘಾ ಮೂಲಕವಾಗಿ ಕಲೈಕುಂಡಕ್ಕೆ ಆಗಮಿಸಲಿದ್ದಾರೆ. ಇಲ್ಲಿಂದ ದೆಹಲಿಗೆ ವಿಮಾನ ಮೂಲಕ ತೆರಳಿದ್ದಾರೆ. ಈ ವೇಳೆ ಪ್ರಧಾನಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಿಎಂ ಮಮತಾ ಬ್ಯಾನರ್ಜಿ ವಿವರಣೆ ನೀಡಿದ್ದಾರೆ.
ಇದನ್ನೂ ಓದಿ:ಕೋವಿಡ್: ಬಂಗಾಳದಲ್ಲಿ ಜೂನ್ 15 ರವರೆಗೆ ಲಾಕ್ಡೌನ್ ಮುಂದುವರಿಕೆ