ನವದೆಹಲಿ: ಭಾರತಕ್ಕೆ ಬೇಕಾಗಿರುವ ಆರೋಪಿ ವಜ್ರದ ವ್ಯಾಪಾರಿ ನೀರವ್ ಮೋದಿಯನ್ನು ಹಸ್ತಾಂತರಿಸಲು ಸಲ್ಲಿಸಿದ್ದ ಮೇಲ್ಮನವಿ ಯುಕೆ ಹೈಕೋರ್ಟ್ನಲ್ಲಿ ವಜಾಗೊಂಡಿದೆ. ಆದರೆ ಆತನನ್ನು ಮತ್ತೆ ದೇಶಕ್ಕೆ ಕರೆತರಲು ಬೇಕಾದ ಇನ್ನಷ್ಟು ಪ್ರಯತ್ನಗಳನ್ನು ಮಾಡುವುದಾಗಿ ವಿದೇಶಾಂಗ ಸಚಿವಾಲಯ ತಿಳಿಸಿದೆ.
ನೀರವ್ ಹಸ್ತಾಂತರ ಪ್ರಕ್ರಿಯೆ ಪ್ರಯತ್ನ ಮುಂದುವರಿಯಲಿದೆ; ವಿದೇಶಾಂಗ ಸಚಿವಾಲಯ - Ministry of External Affairs
ವಜ್ರದ ವ್ಯಾಪಾರಿ ನೀರವ್ ಮೋದಿಯನ್ನು ಭಾರತಕ್ಕೆ ಮರಳಿ ಕರೆತರಲು ಬೇಕಾದ ಎಲ್ಲಾ ಪ್ರಯತ್ನಗಳನ್ನು ಮುಂದುವರಿಸುತ್ತೇವೆ ಎಂದು ವಿದೇಶಾಂಗ ಸಚಿವಾಲಯದ (ಎಂಇಎ) ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.
ಏಪ್ರಿಲ್ನಲ್ಲಿ ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಇಲ್ಲಿನ ಹೈಕೋರ್ಟ್ನಲ್ಲಿ ಹಸ್ತಾಂತರದ ಮೇಲ್ಮನವಿಯ ಅರ್ಜಿ ಸಲ್ಲಿಸಿದ್ದು, ಇದರ ಮೊದಲ ಹಂತದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಆನ್‌ಲೈನ್ ಮೂಲಕ ಈ ಬಗ್ಗೆ ಮಾತನಾಡಿದ ವಿದೇಶಾಂಗ ಸಚಿವಾಲಯದ (ಎಂಇಎ) ವಕ್ತಾರ ಅರಿಂದಮ್ ಬಾಗ್ಚಿ, "ಹಸ್ತಾಂತರಕ್ಕಾಗಿ ಸಲ್ಲಿಸಿದ್ದ ಮೇಲ್ಮನವಿಯನ್ನು ಯುಕೆ ಹೈಕೋರ್ಟ್ ತಿರಸ್ಕರಿಸಿದೆ. ಈ ಬಗ್ಗೆ ನಾವು ಇನ್ನಷ್ಟು ಪ್ರಯತ್ನ ಮಾಡುತ್ತೇವೆ" ಎಂದಿದ್ದಾರೆ.
"ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ಹಣ ವಂಚಿಸಿರುವ ಪ್ರಕರಣದ ಕುರಿತು ವಿಚಾರಣೆ ನಡೆಸಲು ಭಾರತಕ್ಕೆ ನೀರವ್ ಮೋದಿ ಬೇಕಾಗಿದೆ. ಹೀಗಾಗಿ ಆತನನ್ನು ದೇಶಕ್ಕೆ ಮರಳಿ ಕರೆತರಲು ಬೇಕಾದ ಎಲ್ಲಾ ಪ್ರಯತ್ನಗಳನ್ನು ಮುಂದುವರಿಸುತ್ತೇವೆ" ಎಂದು ಅವರು ಹೇಳಿದರು.