ಕರ್ನಾಲ್(ಹರಿಯಾಣ): ಕೇಂದ್ರ ಸರ್ಕಾರದ ವಿವಾದಾತ್ಮಕ ಕಾಯ್ದೆಗಳ ವಿರುದ್ಧ ರೈತರು ಹೋರಾಟ ಮುಂದುವರೆಸಿದ್ದಾರೆ. ಸರ್ಕಾರ ಕಾನೂನುಗಳನ್ನು ಹಿಂಪಡೆಯುವವರೆಗೆ ನಾವು ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಸರ್ಕಾರದೊಂದಿಗೆ ಕೃಷಿ ಕಾಯ್ದೆ ಸಂಬಂಧಿ ಮಾತುಕತೆಗಳು ವಿಫಲಗೊಂಡ ಬಳಿಕ ಕರ್ನಾಲ್ನಲ್ಲಿರುವ ಮಿನಿ ಸೆಕ್ರೆಟರಿಯೇಟ್ ಬಳಿ ಸಂಯುಕ್ತ ಕಿಸಾನ್ ಮೋರ್ಚಾದ ರೈತರು ಧರಣಿ ನಡೆಸಲು ಮುಂದಾದರು. ಈ ವೇಳೆ, ಪೊಲೀಸರು ಅವರನ್ನು ತಡೆದಿದ್ದಾರೆ. ನಂತರ ಮಿನಿ ಸೆಕ್ರೆಟರಿಯೇಟ್ ಹೊರಗೆ, ರಸ್ತೆ ಬದಿಯಲ್ಲಿ ಶಿಬಿರಗಳನ್ನು ಸ್ಥಾಪಿಸಿ, ರೈತರು ಅಲ್ಲಿಯೇ ಉಳಿದುಕೊಂಡಿದ್ದಾರೆ.