ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರಿ ಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆಂದು ಕಾಂಗ್ರೆಸ್ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಉತ್ತರ ನೀಡುವಂತೆ ತಿಳಿಸಿದೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಎಲ್ಲ ಪೋಸ್ಟ್ ಡಿಲೀಟ್ ಮಾಡುವಂತೆ ಸೂಚನೆ ನೀಡಿದೆ.
ಕಾಂಗ್ರೆಸ್ ಮುಖಂಡರಾದ ಜೈರಾಮ್ ರಮೇಶ್ ,ಪವನ್ ಖೇರಾ ಮತ್ತು ನೆಟ್ಟ ಡಿಸೋಜಾ ಅವರಿಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಅಕ್ರಮ ಬಾರ್ಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಎಲ್ಲ ಪೋಸ್ಟ್ ಡಿಲೀಟ್ ಮಾಡುವಂತೆ ಸೂಚಿಸಿದೆ.
ತಮ್ಮ ಮಗಳ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದರ ಬೆನ್ನಲ್ಲೇ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದು, ನ್ಯಾಯಾಯಲದ ಮುಂದೆ ಸತ್ಯವನ್ನ ಹೇಳಲು ಕಾಯುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.