ನವದೆಹಲಿ:ದೆಹಲಿ ನಾಗರಿಕರಿಗೆ ಕೇಂದ್ರ ಸರ್ಕಾರ ಉಚಿತವಾಗಿ ಕೋವಿಡ್ ಲಸಿಕೆ ನೀಡಲು ವಿಫಲವಾದರೆ ನಾವು ನೀಡಲು ಸಿದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಓದಿ: ಮುಂದಿನ ವಾರದಿಂದ ದೆಹಲಿಯಲ್ಲಿ 10, 12ನೇ ತರಗತಿಗಳು ಆರಂಭ: ಹಾಜರಾತಿ ಕಡ್ಡಾಯವಲ್ಲ!

ದೇಶದ ಎಲ್ಲರಿಗೂ ಉಚಿತವಾಗಿ ಕೊರೊನಾ ವ್ಯಾಕ್ಸಿನ್ ನೀಡುವಂತೆ ನಾವು ಕೇಂದ್ರದ ಬಳಿ ಮನವಿ ಮಾಡಿದ್ದೇವೆ. ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂದು ನಾವು ಕಾಯ್ದು ನೋಡುತ್ತಿದ್ದೇವೆ. ಒಂದು ವೇಳೆ ಅವರು ವಿಫಲವಾದರೆ ನಾವು ಉಚಿತವಾಗಿ ನೀಡಲು ಸಿದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
ಕೊರೊನಾ ವ್ಯಾಕ್ಸಿನ್ ಬಗ್ಗೆ ಯಾವುದೇ ರೀತಿಯ ವದಂತಿ ಹರಡದಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಕೋವಿಡ್ ವ್ಯಾಕ್ಸಿನ್ ಅಭಿವೃದ್ಧಿಯಲ್ಲಿ ಎಲ್ಲಾ ಪ್ರೋಟೋಕಾಲ್ ಮತ್ತು ಸುರಕ್ಷತೆ ಅನುಸರಿಸಿ ಕೇಂದ್ರ ಮತ್ತು ನಮ್ಮ ವಿಜ್ಞಾನಿಗಳು ಲಸಿಕೆ ಹೊರ ತಂದಿದ್ದಾರೆ. ಇದರಲ್ಲಿ ಯಾವುದೇ ಸಂದೇಹ ಇರಬಾರದು. ಲಸಿಕೆ ತೆಗೆದುಕೊಳ್ಳಲು ಎಲ್ಲರೂ ಮುಂದೆ ಬರಬೇಕು ಎಂದು ಅವರು ತಿಳಿಸಿದ್ದಾರೆ.
ದೆಹಲಿಯಲ್ಲೂ ಕೊರೊನಾ ವೈರಸ್ ವ್ಯಾಕ್ಸಿನ್ ಆರೋಗ್ಯ ಸಿಬ್ಬಂದಿ, ಫ್ರಂಟ್ಲೈನ್ ವರ್ಕರ್ಸ್ಗೆ ನೀಡಲು ನಿರ್ಧರಿಸಲಾಗಿದೆ ಎಂದಿರುವ ಅವರು, ದೆಹಲಿಯ 89 ಸೆಂಟರ್ಗಳಲ್ಲಿ ಕೊರೊನಾ ವ್ಯಾಕ್ಸಿನ್ ಈಗಾಗಲೇ ಹಂಚಿಕೆಯಾಗಿದೆ ಎಂದಿದ್ದಾರೆ.