ತಪನ್ (ಪಶ್ಚಿಮ ಬಂಗಾಳ): ಇಡೀ ದೇಶದಲ್ಲೇ ತೀವ್ರ ಕುತೂಹಲ ಮೂಡಿಸಿರುವ ಬಂಗಾಳ ವಿಧಾನಸಭೆ ಚುನಾವಣಾ ಫಲಿತಾಂಶ ಮೇ 2 ರಂದು ಹೊರ ಬೀಳಲಿದೆ. ಮೇ 5ರ ನಂತರ ಇಲ್ಲಿನ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ವ್ಯಾಕ್ಸಿನ್ ಉಚಿತವಾಗಿ ನೀಡುತ್ತೇವೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ತಪನ್‌ನಲ್ಲಿ ನಡೆದ ಚುನಾವಣಾ ರಾಲಿಯಲ್ಲಿ ಮಾತನಾಡಿರುವ ದೀದಿ, ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಪ್ರಕರಣಗಳನ್ನು ತಡೆಯಲು ಉಚಿತ ವ್ಯಾಕ್ಸಿನೇಷನ್ ಭರವಸೆ ನೀಡಿದ್ದಾರೆ.
ಕರ್ನಾಟಕದಲ್ಲಿ ಮೇ 1 ರಿಂದಲೇ 18 ರಿಂದ 44 ವರ್ಷದವರಿಗೆ ಉಚಿತವಾಗಿ ಕೊರೊನಾ ಲಸಿಕೆಯನ್ನು ನೀಡಲಾಗುತ್ತಿದೆ. ಇದಕ್ಕಾಗಿ 400 ಕೋಟಿ ರೂಪಾಯಿ ಖರ್ಚು ಮಾಡಿ ಕೋವಿಶೀಲ್ಡ್ ಲಸಿಕೆಯನ್ನು ತರಿಸಿಕೊಳ್ಳಲಾಗುತ್ತಿದೆ. 1 ಕೋಟಿ ಡೋಸ್‌ಗಳನ್ನು ಶೇಖರಿಸಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ರು. ಏಪ್ರಿಲ್ 28 ರಿಂದ ಅರ್ಹರು ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಳ್ಳಬೇಕೆಂದು ಕೋರಿದ್ದರು.