ಕರ್ನಾಟಕ

karnataka

ETV Bharat / bharat

ಕರ್ನಾಟಕದಲ್ಲಿ ಕಾಂಗ್ರೆಸ್​ ಗೆಲುವು.. ಕಾಂಗ್ರೆಸ್​ಗೆ ಸೂಪರ್​ ಬೂಸ್ಟರ್​ ಡೋಸ್​​: ಜೈರಾಮ್​ ರಮೇಶ್​​ - ಈಟಿವಿ ಭಾರತ ಕನ್ನಡ

ಭಾರತ್ ಜೋಡೋ ಯಾತ್ರೆಯಿಂದ ಇಡೀ ಕಾಂಗ್ರೆಸ್ ಪಕ್ಷಕ್ಕೆ ಬೂಸ್ಟರ್ ಡೋಸ್ ಸಿಕ್ಕಿದೆ. ಇದರ ಪರಿಣಾಮಗಳನ್ನು ಈ ಚುನಾವಣೆಯಲ್ಲಿ ನಾವು ಎದುರು ನೋಡುತ್ತಿದ್ದೇವೆ ಎಂದು ಕಾಂಗ್ರೆಸ್​ ಹಿರಿಯ ನಾಯಕ ಜೈರಾಮ್​ ರಮೇಶ್ ಹೇಳಿದ್ದಾರೆ.

win-in-karnataka-will-be-super-booster-dose-for-congress-jairam-ramesh
ಕರ್ನಾಟಕದಲ್ಲಿ ಕಾಂಗ್ರೆಸ್​ ಗೆಲುವು.. ಕಾಂಗ್ರೆಸ್​ಗೆ ಸೂಪರ್​ ಬೂಸ್ಟರ್​ ಡೋಸ್​​ : ಜೈರಾಮ್​ ರಮೇಶ್​​

By

Published : May 1, 2023, 7:21 PM IST

ನವದೆಹಲಿ :ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿ ನೇತೃತ್ವದ ಭಾರತ್​ ಜೋಡೋ ಯಾತ್ರೆ ಕಾಂಗ್ರೆಸ್​ ಪಕ್ಷವನ್ನು ಸಂಘಟನಾತ್ಮಕವಾಗಿ ಪುನಶ್ಚೇತನಗೊಳಿಸಿದ ನಂತರ ಕರ್ನಾಟಕ ವಿಧಾನಸಭೆಯಲ್ಲಿನ ಗೆಲುವು ಕಾಂಗ್ರೆಸ್​​ಗೆ ಚುನಾವಣಾತ್ಮಕವಾಗಿ "ಸೂಪರ್​ ಬೂಸ್ಟರ್​ ಡೋಸ್​" ಆಗಲಿದೆ ಎಂದು ಕಾಂಗ್ರೆಸ್​ ಹಿರಿಯ ನಾಯಕ ಜೈರಾಮ್​ ರಮೇಶ್ ಅಭಿಪ್ರಾಯಪಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024ರ ಸಾರ್ವತ್ರಿಕ ಚುನಾವಣೆಗೆ ಇನ್ನು ಕೆಲವು ತಿಂಗಳುಗಳು ಬಾಕಿ ಇದೆ. ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶವು ಮುಂಬರುವ ರಾಜಸ್ಥಾನ, ಛತ್ತೀಸ್​ಗಢ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಮೇಲೆ ಖಂಡಿತವಾಗಿಯೂ ಪರಿಣಾಮ ಬೀರಲಿದೆ ಎಂದು ಹೇಳಿದರು.

ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್​ ಗೆಲುವು ಮುಂಬರುವ ಇತರ ರಾಜ್ಯಗಳ ಚುನಾವಣೆ ಮೇಲೆ ಪ್ರಭಾವ ಬೀರುತ್ತದೆ. ಕರ್ನಾಟಕದ ಗೆಲುವು ತೆಲಂಗಾಣ, ರಾಜಸ್ಥಾನ, ಛತ್ತೀಸ್​ಗಢ, ಮಧ್ಯಪ್ರದೇಶ ಮತ್ತು ಮಿಜೋರಾಂನಲ್ಲಿನ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್​ನ್ನು ಬಲಪಡಿಸುತ್ತದೆ. ನಾನು 2024ರ ಸಾರ್ವತ್ರಿಕ ಚುನಾವಣೆಯನ್ನು ಎದುರು ನೋಡಲು ಬಯಸುವುದಿಲ್ಲ. ಆದರೆ ನಾನು 2023ರ ಕರ್ನಾಟಕ ಚುನಾವಣೆಯನ್ನು ಎದುರು ನೋಡುತ್ತೇನೆ. ಕರ್ನಾಟಕದಲ್ಲಿ ಗೆಲುವು ಕಾಂಗ್ರೆಸ್‌ಗೆ ಸೂಪರ್ ಬೂಸ್ಟರ್ ಡೋಸ್ ಅಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತ್ ಜೋಡೋ ಯಾತ್ರೆಯು ಸೈದ್ಧಾಂತಿಕವಾಗಿ ಮತ್ತು ಸಂಘಟನಾತ್ಮಕವಾಗಿ ಕಾಂಗ್ರೆಸ್​ನ್ನು ಪುನರುಜ್ಜೀವನಗೊಳಿಸಿದರೆ, ಕರ್ನಾಟಕದಲ್ಲಿ ಕಾಂಗ್ರೆಸ್​​ ಗೆಲುವು ಚುನಾವಣೆಯನ್ನು ಪುನರುಜ್ಜೀವನಗೊಳಿಸುತ್ತದೆ ಎಂದು ರಮೇಶ್ ಅಭಿಪ್ರಾಯಪಟ್ಟರು. ಇನ್ನು, ಛತ್ತೀಸ್​ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ನಾವು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಆಶ್ಚರ್ಯ ಪಡಬೇಡಿ. ಮಧ್ಯಪ್ರದೇಶದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರು ಸಹೋದ್ಯೋಗಿಗಳು ಮೋಸ ಮಾಡಿ ಕಾಂಗ್ರೆಸ್​ ಸರ್ಕಾರದ ಅಧಿಕಾರವನ್ನು ಕಿತ್ತುಕೊಂಡರು ಎಂದು ವಾಗ್ದಾಳಿ ನಡೆಸಿದರು.

ತೆಲಂಗಾಣದಲ್ಲಿ ಕಾಂಗ್ರೆಸ್​ ಮತ್ತು ಬಿಆರ್​ಎಸ್​ ನಡುವೆ ಭರ್ಜರಿ ಪೈಪೋಟಿ ನಡೆಯುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾಗಿ ಪ್ರಬಲ ಅಲೆ ಇದೆ. ಬಿಜೆಪಿ ಭದ್ರಕೋಟೆ ಎಂದು ಕರೆಯಲಾಗುವ ಕರಾವಳಿಯಲ್ಲೂ ಬದಲಾವಣೆ ಗಾಳಿ ಬೀಸುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ಕರ್ನಾಟಕದ ಜನತೆ ಬಿಜೆಪಿಯ ಆಡಳಿತವನ್ನು ನೋಡಿದ್ದಾರೆ. ಇದರಿಂದಾಗಿ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್​ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ದಕ್ಷಿಣದಲ್ಲಿ ಬಿಜೆಪಿ ಸರ್ಕಾರ ಹೊಂದಿರುವ ಏಕೈಕ ರಾಜ್ಯ ಎಂದರೆ ಕರ್ನಾಟಕ. ಕೇರಳ, ತಮಿಳುನಾಡು ಅಥವಾ ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಯಾವುದೇ ನಿರೀಕ್ಷೆಯಿಲ್ಲ. ಹಾಗಾಗಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ.

ಕರ್ನಾಟಕದಲ್ಲಿ ಪ್ರಧಾನಿ ಮೋದಿ ಅವರು ಮುಂದಿನ ಕೆಲವು ದಿನಗಳ ಕಾಲ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇದರ ಜೊತೆಗೆ ಅಮಿತ್ ಶಾ, ರಾಜನಾಥ್ ಸಿಂಗ್, ಯೋಗಿ ಆದಿತ್ಯನಾಥ್ ಸೇರಿ ಹಲವು ಕೇಂದ್ರ ಮಂತ್ರಿಗಳು ಉನ್ನತ ಮಟ್ಟದ ಪ್ರಚಾರವನ್ನು ಕೈಗೊಳ್ಳುತ್ತಿದ್ದಾರೆ. ಇಡೀ ಕೇಂದ್ರ ಸರ್ಕಾರ ಮತ್ತು ಬಿಜೆಪಿ ಕರ್ನಾಟಕದ ಮೇಲೆ ತನ್ನ ಹೆಚ್ಚಿನ ಗಮನವನ್ನು ಹರಿಸುತ್ತಿದೆ. ಭಾರತ್ ಜೋಡೋ ಯಾತ್ರೆಯಿಂದ ಇಡೀ ಕಾಂಗ್ರೆಸ್ ಪಕ್ಷಕ್ಕೆ ಬೂಸ್ಟರ್ ಡೋಸ್ ಸಿಕ್ಕಿದೆ. ಇದರ ಪರಿಣಾಮಗಳನ್ನು ಈ ಚುನಾವಣೆಯಲ್ಲಿ ನಾವು ನೋಡುತ್ತಿದ್ದೇವೆ ಎಂದರು.

ಇದನ್ನೂ ಓದಿ :ಬಿಜೆಪಿ ಪ್ರಣಾಳಿಕೆ ಸುಳ್ಳಿನ ಕಂತೆ, ಹಿಂದಿನ ಭರವಸೆಗಳನ್ನೇ ಈಡೇರಿಸಿಲ್ಲ: ಕಾಂಗ್ರೆಸ್

ABOUT THE AUTHOR

...view details