ಉದಯಪುರ (ರಾಜಸ್ಥಾನ): ಉದಯಪುರದಲ್ಲಿ ಇಂದು (ಮಂಗಳವಾರ) 30 ವರ್ಷದ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಬಚ್ಚರ್ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಬಚ್ಚರ್ ಗ್ರಾಮದ ನಿವಾಸಿ ನವ್ಲಿ ಬಾಯಿ ಎಂದು ಗುರುತಿಸಲಾಗಿದೆ. ಮೃತ ಮಕ್ಕಳ ವಯಸ್ಸು 8 ರಿಂದ 12 ವರ್ಷ ಎಂದು ತಿಳಿದುಬಂದಿದೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಬಾವಿಯಿಂದ ಹೊರತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ. ಠಾಣಾಧಿಕಾರಿ ಶ್ಯಾಮ್ ರತ್ನು ಮಾತನಾಡಿ, "ಮಹಿಳೆ ಮತ್ತು ಮೂವರು ಮಕ್ಕಳ ಸಾವಿನ ಬಗ್ಗೆ ನಮಗೆ ಮಾಹಿತಿ ಬಂದಿದೆ. ಶವಗಳನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ" ಎಂದರು.
ಟ್ಯೂಷನ್‌ಗೆ ಹೋಗಿದ್ದ ಮಗು ಬಾವಿಯಲ್ಲಿ ಮುಳುಗಿ ಸಾವು: ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯಲ್ಲಿ ಆರು ವರ್ಷದ ಮಗುವೊಂದು ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿತ್ತು. ಮಗು ಟ್ಯೂಷನ್‌ಗೆ ಹೋಗುತ್ತಿತ್ತು. ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಮಯಾಂಕ್ ಸಾಹು ಸಂಜೆ 4 ಗಂಟೆ ಸುಮಾರಿಗೆ ಟ್ಯೂಷನ್‌ಗೆ ತೆರಳಿದ್ದರು. ಆದರೆ ಅವರು ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ.
ಆತನನ್ನು ಕಾಣದ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರತಿಯಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ಮನೆಯ ಸಮೀಪದ ಬಾವಿಯೊಳಗೆ ಮಗುವಿನ ಶವ ಪತ್ತೆಯಾಗಿದೆ. ನಂತರ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.