ಲಖನೌ :ಉತ್ತರಪ್ರದೇಶದಲ್ಲಿ 2ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದ ಖುಷಿಯಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ರಿಗೆ ಮಹಿಳೆಯೋರ್ವಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಶಾಕ್ ನೀಡಿದ್ದಾಳೆ.
ಸಿಎಂ ಯೋಗಿ ಆದಿತ್ಯನಾಥ್ ಅವರು ಲಖನೌದಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ ಬಳಿಕ ಪ್ರತಿಭಟನೆಗೆ ಮುಂದಾದ ಮಹಿಳೆ, ಹಠಾತ್ತಾಗಿ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾಳೆ.