ಚಿಕ್ಕಬಳ್ಳಾಪುರ: ಪ್ರಿಯಕರನ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ ಯುವತಿ ಜೈಲುಪಾಲಾದ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಆನೆಮಡುಗು ಗ್ರಾಮದಲ್ಲಿ ನಡೆದಿದೆ.
ಆನೆಮಡುಗು ಗಂಗೋತ್ರಿ(19) ಕೊಲೆ ಮಾಡಲು ಯತ್ನಿಸಿದ ಆರೋಪಿ ಎಂದು ತಿಳಿದು ಬಂದಿದೆ. ಗಂಗೋತ್ರಿ ಹಾಗೂ ಅದೇ ಗ್ರಾಮದ ಗಂಗರಾಜು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಕಳೆದ 10 ತಿಂಗಳ ಹಿಂದೆ ಗಂಗಾರಾಜು ತನ್ನ ಅಕ್ಕನ ಮಗಳನ್ನು ಮದುವೆಯಾದರು. ಇದನ್ನು ಸಹಿಸದ ಗಂಗೋತ್ರಿಯು ಗಂಗಾರಾಜುವಿನ ಹೆಂಡತಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ್ದಾಳೆ. ಇದರಿಂದ ಗಾಯಾಳು ಮೋನಿಕಾ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.