ಲಲಿತ್‌ಪುರ:ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಅತ್ಯಾಚಾರ ವಿರೋಧಿಸಿದ್ದಕ್ಕೆ ದುಷ್ಕರ್ಮಿಗಳು ಮಹಿಳೆಯ ಕಣ್ಣುಗಳನ್ನು ಸುಟ್ಟು ಹಾಕಿರುವ ಘಟನೆ ಬಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಾನು ಮಾರುಕಟ್ಟೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ನಮ್ಮ ಹಳ್ಳಿಯ ನಿವಾಸಿಗಳಾದ ಹಿಮಾಂಶು ಮತ್ತು ಗಂಗ್ರಾಮ್ ನನ್ನನ್ನು ಹಿಡಿದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದರು. ಇದಕ್ಕೆ ನಾನು ವಿರೋಧ ವ್ಯಕ್ತಪಡಿಸಿದಾಗ ನನ್ನ ಮೇಲೆ ಹಲ್ಲೆ ಮಾಡಿದರು. ಬಳಿಕ ಚಾಕುವನ್ನು ಲೈಟರ್ನಿಂದ ಬಿಸಿಗೊಳಿಸಿ ನನ್ನ ಕಣ್ಣುಗಳ ಮೇಲಿಟ್ಟರು. ನಾನು ಕಣ್ಣುಗಳು ಮುಚ್ಚಿಕೊಂಡಿದ್ದರಿಂದ ರೆಪ್ಪೆಯ ಮೇಲಿನ ಭಾಗ ಸಂಪೂರ್ಣ ಸುಟ್ಟು ಹೊಯ್ತು. ಬಳಿಕ ನಾನು ಮೂರ್ಛೆ ಹೋದಾಗ ಅವರು ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ.
ಎಷ್ಟೊತ್ತಾದ್ರೂ ಮನೆಗೆ ಮಹಿಳೆ ಬಾರದ ಹಿನ್ನೆಲೆ ಆಕೆಯ ಕುಟುಂಬಸ್ಥರು ಹುಡುಕಾಟ ಆರಂಭಿಸಿದರು. ಬಳಿಕ ಕುಟುಂಬಸ್ಥರಿಗೆ ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಈ ವಿಷಯವನ್ನು ತಕ್ಷಣ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದರು. ಪೊಲೀಸರು ಸ್ಥಳಕ್ಕೆ ತಲುಪಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಗಂಭೀರವಾಗಿ ಗಾಯಗಗೊಂಡಿರುವ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂರು ತಿಂಗಳ ಹಿಂದೆ ನನ್ನ ಅತ್ತಿಗೆ ಮತ್ತು ಗಂಡನ ಮೇಲೆ ಹಲ್ಲೆ ನರೆಹೊರೆಯವರು ಹಲ್ಲೆ ಮಾಡಿದ್ದರು. ಆರೋಪಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದಾಗಿ ಅವರಲ್ಲಿ ದ್ವೇಷಗಳು ಬೆಳೆದವು ಎಂದು ಸಂತ್ರಸ್ತೆ ಮಹಿಳೆ ಹೇಳಿದ್ದಾರೆ.
ಸಂತ್ರಸ್ತೆಯ ಕುಟುಂಬದ ದೂರಿನ ಮೇರೆಗೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳಿಗಾಗಿ ಶೋಧಿಸಲಾಗುತ್ತಿದೆ ಎಂದು ಪೊಲೀಸ್ ಠಾಣೆ ಅಧಿಕಾರಿ ಬಾರ್ ಅಂಜನಿ ಕುಮಾರ್ ತಿಳಿಸಿದ್ದಾರೆ.