ಥಾಣೆ, ಮಹಾರಾಷ್ಟ್ರ: ಮೊಬೈಲ್ ಕಳ್ಳರ ಕಾರಣದಿಂದಾಗಿ ಯುವತಿಯೋರ್ವಳು ಪ್ರಾಣ ಕಳೆದುಕೊಂಡಿರುವ ಘಟನೆ ಮುಂಬೈ ಸಮೀಪದ ಥಾಣೆ ಸಮೀಪ ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಮಾಲ್ನಲ್ಲಿರುವ ಸ್ಪಾನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಕೆಲಸ ಮುಗಿಸಿಕೊಂಡು ತನ್ನ ಸ್ನೇಹಿತೆಯೊಂದಿಗೆ ಆಟೋರಿಕ್ಷಾದಲ್ಲಿ ರಾತ್ರಿ ಸುಮಾರು 8 ಗಂಟೆಗೆ ಮನೆಗೆ ತೆರಳುತ್ತಿದ್ದಳು. ಈ ವೇಳೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆಟೋರಿಕ್ಷಾದಲ್ಲಿ ಕುಳಿತಿದ್ದ ಯುವತಿಯ ಕೈಯಿಂದ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ.
ಈ ವೇಳೆ ಪಟ್ಟು ಬಿಡದ ಯುವತಿ ತನ್ನ ಮೊಬೈಲ್ ಅನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದು, ಆಟೋ ರಿಕ್ಷಾದಿಂದ ಹೊರಗೆ ಬಾಗಿದ್ದಾಳೆ. ಈ ವೇಳೆ ನಿಯಂತ್ರಣ ತಪ್ಪಿ, ರಸ್ತೆಯ ಮೇಲೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾಳೆ.