ಕೊಲ್ಲಂ (ಕೇರಳ): 24 ವರ್ಷದ ವಿವಾಹಿತ ಮಹಿಳೆಯೊಬ್ಬಳು ಗಂಡನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೇರಳದ ಕೊಲ್ಲಂನಲ್ಲಿ ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು, ವಿಸ್ಮಯ ಎಂಬ ಮಹಿಳೆ ಸಾವನ್ನಪ್ಪಿದ್ದಾಳೆ.
ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಿವಾಹಿತ ಮಹಿಳೆ ಕುಟುಂಬಸ್ಥರು, ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದು, ಇದೊಂದು ಕೊಲೆ ಎಂದು ಆರೋಪಿಸಿದ್ದಾರೆ. ವಿಸ್ಮಯ ಗಂಡ ಕಿರಣಕುಮಾರ್ ಮೋಟಾರು ವಾಹನ ಇಲಾಖೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, 2020ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದಾದ ಬಳಿಕ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ಕೂಡ ಆಕೆಯ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.