ಶಹಜಹಾನ್ಪುರ(ಉತ್ತರ ಪ್ರದೇಶ): 30 ವರ್ಷದ ಮಹಿಳೆಯ ಮೇಲೆ ಐವರು ಅತ್ಯಾಚಾರವೆಸಗಿ, ಕೃತ್ಯವನ್ನು ರೆಕಾರ್ಡ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ ಎಂದು ಮಹಿಳೆ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಶಹಜಾನ್ಪುರದಲ್ಲಿ ಏಪ್ರಿಲ್ 22ರಂದು ದುಷ್ಕರ್ಮಿಗಳು ಮಹಿಳೆಯನ್ನು ಮನೆಯ ಹೊರಗಿನ ಗುಡಿಸಲಿಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.
ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ: ವಿಡಿಯೋ ವೈರಲ್ ಮಾಡಿದ ದುರುಳರು
ಉತ್ತರ ಪ್ರದೇಶದ ಶಹಜಾನ್ಪುರದಲ್ಲಿ ಮಹಿಳೆಯೋರ್ವಳ ಮೇಲೆ ಐವರು ಅತ್ಯಾಚಾರ ನಡೆಸಿ, ಕೃತ್ಯವನ್ನು ರೆಕಾರ್ಡ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.
ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ: ವಿಡಿಯೋ ವೈರಲ್ ಮಾಡಿದ ದುಷ್ಕರ್ಮಿಗಳು
ಮದನಾಪುರ ಪೊಲೀಸ್ ಠಾಣೆಯಲ್ಲಿ ಮಹಿಳೆ ನೀಡಿದ ದೂರು ದಾಖಲಿಸಿಕೊಳ್ಳಲಾಗಿದ್ದು, ಎಫ್ಐಆರ್ ಆಧರಿಸಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಂಜಯ್ ಕುಮಾರ್ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ಕೃತ್ಯವನ್ನು ಚಿತ್ರೀಕರಿಸಿ, ಒಂದು ವಾರದ ನಂತರ ವಿಡಿಯೋ ವೈರಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ:ಉನ್ನಾವೋ: ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ!