ಕರ್ನಾಟಕ

karnataka

ETV Bharat / bharat

ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ: ಪೊಲೀಸ್​ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲು - etv bharat kannada

Woman Gangraped In Palwal: ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಹರಿಯಾಣದಲ್ಲಿ ವರದಿಯಾಗಿದೆ.

woman-gangraped-in-palwal-haryana-crime-news-case-filed-against-7-people-including-one-policeman
ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ: 7 ಜನರ ವಿರುದ್ಧ ಪ್ರಕರಣ ದಾಖಲು

By ETV Bharat Karnataka Team

Published : Sep 5, 2023, 4:06 PM IST

ಪಲ್ವಾಲ್(ಹರಿಯಾಣ): ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಪಲ್ವಾಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು, ಪಲ್ವಾಲ್ ಮಹಿಳಾ ಪೊಲೀಸ್​ ಠಾಣಾಧಿಕಾರಿ ಮತ್ತು ಒಬ್ಬ ಮಹಿಳೆ ಸೇರಿದಂತೆ 7 ಜನರ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾಹಿತಿಯ ಪ್ರಕಾರ, ಪೊಲೀಸ್ ಅಧಿಕಾರಿ ನನ್ನ ದೂರನ್ನು ತೆಗೆದುಕೊಳ್ಳಲು ನಿರಾಕರಿಸಿ, ನಂತರ ತನ್ನನ್ನು ಬಲವಂತವಾಗಿ ಬಲ್ಲಿ ಎಂಬ ವ್ಯಕ್ತಿಯೊಂದಿಗೆ ಕಳುಹಿಸಿದ್ದಾರೆ. ಬಲ್ಲಿ ನನ್ನನ್ನು ಹೊಲದಲ್ಲಿರುವ ಮನೆಯೊಂದಕ್ಕೆ ಕರೆದೊಯ್ದನು, ಅಲ್ಲಿ ನಿರಂಜನ್ ಮತ್ತು ಭೀಮ್ ಎಂಬ ವ್ಯಕ್ತಿಗಳು ಸೇರಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

ಮೂವರೂ ಸಂತ್ರಸ್ತೆಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಮತ್ತು ಮಹಿಳೆಯ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ವಿಡಿಯೋ ಮತ್ತು ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ, ಮೂವರು ಪಲ್ವಾಲ್‌ನಲ್ಲಿರುವ ಸಂತ್ರಸ್ತೆಯ ಮನೆಗೆ ಕರೆದೊಯ್ದು, ಅಲ್ಲಿ ರಾತ್ರಿಯಿಡೀ ಆಕೆಗೆ ಮಾದಕ ದ್ರವ್ಯ ನೀಡಿ ಮತ್ತೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇದಾದ ನಂತರ ಸಂತ್ರಸ್ತೆಯನ್ನು ಮೂವರು ಆರೋಪಿಗಳು ಬಿಜೇಂದ್ರ ಎಂಬ ವ್ಯಕ್ತಿಗೆ ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಆ.30ರಂದು ಸಂತ್ರಸ್ತೆ ಗಜೇಂದ್ರ ಎಂಬುವನ ಮನೆಯಿಂದ ದೂರವಾಣಿ ಕರೆ ಮಾಡಿ ವಿಷಯವನ್ನು ಪೊಲೀಸರಿಗೆ, ಪತಿ ಹಾಗೂ ತಾಯಿಗೆ ಮಾಹಿತಿ ನೀಡಿದ್ದಾಳೆ. ಪೊಲೀಸರು ಗಜೇಂದ್ರನ ಮನೆಗೆ ಬಂದು ಸಂತ್ರಸ್ತೆಯನ್ನು ರಕ್ಷಣೆ ಮಾಡಿ ಠಾಣೆಗೆ ಕರೆದೊಯ್ದು. ನಂತರ ಸಂತ್ರಸ್ತೆಯನ್ನು ಪೊಲೀಸ್​ ಠಾಣೆಯಿಂದ ಪತಿ ಮತ್ತು ತಾಯಿಯೊಂದಿಗೆ ಕಳುಹಿಸಿ ಕೊಟ್ಟಿದ್ದಾರೆ. ಸಂತ್ರಸ್ತೆ ತನ್ನ ಪತಿಗೆ ಮಾಹಿತಿ ನೀಡಿ ಬಳಿಕ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾಳೆ. ಸಂತ್ರಸ್ತೆಯ ದೂರಿನ ಮೇರೆಗೆ ಪಲ್ವಾಲ್ ಮಹಿಳಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಶಿವಚರಣ್, ಬಲ್ಲಿ, ನಿರಂಜನ್, ಭೀಮ್, ಬಿಜೇಂದ್ರ, ಗಜೇಂದ್ರ ಮತ್ತು ಓರ್ವ ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 376 ಡಿ, 506, 370, 120 ಬಿ, 342 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯ ಪ್ರಭಾರ ಠಾಣಾಧಿಕಾರಿ ಸುಶೀಲಾದೇವಿ ಮಾತನಾಡಿ, ಹಸನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ವಾಸಿಸುತ್ತಿರುವ ವಿವಾಹಿತ ಮಹಿಳೆ ಪಲ್ವಾಲ್ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪತಿಯೊಂದಿಗೆ ಮನಸ್ತಾಪ ಇತ್ತು ಎಂದು ಸಂತ್ರಸ್ತ ಮಹಿಳೆ ಹೇಳಿದ್ದಾರೆ. ಈ ಸಂಬಂಧ ಸಂತ್ರಸ್ತ ಮಹಿಳೆ ಜುಲೈ 27ರಂದು ಹಸನ್‌ಪುರ ಪೊಲೀಸ್​ ಠಾಣೆಗೆ ದೂರು ನೀಡಲು ಆಗಮಿಸಿದ್ದರು. ಆದರೆ ಠಾಣಾಧಿಕಾರಿ ಶಿವಚರಣ್ ಆಕೆಯ ದೂರನ್ನು ಸ್ವೀಕರಿಸಲು ನಿರಾಕರಿಸಿದ್ದರು. ಘಟನೆ ಸಂಬಂಧ ಎಲ್ಲಾ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಲಾಗುತ್ತಿದೆ ಎಂದರು.

ಇದನ್ನೂ ಓದಿ:ಗಂಗಾವತಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ.. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ABOUT THE AUTHOR

...view details