ಪಠಾಣ್‌ಕೋಟ್ (ಪಂಜಾಬ್):ಗರ್ಭಿಣಿಯೊಬ್ಬರು ಆಸ್ಪತ್ರೆಯ ಹಾಲ್ನಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಪಂಜಾಬ್ನ ಪಠಾಣ್ಕೋಟ್ನಲ್ಲಿ ನಡೆದಿದೆ. ಮಹಿಳೆ ಹಾಲ್ನಲ್ಲೇ ಮಗುವಿಗೆ ಜನ್ಮ ನೀಡಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ಈ ವಿಡಿಯೋ ಇಡೀ ಮನುಕುಲವನ್ನೇ ನಾಚಿಸುವಂತಿದೆ.
ಸಿಕ್ಕಿರುವ ಮಾಹಿತಿ ಪ್ರಕಾರ, ವೈರಲ್ ವಿಡಿಯೋ ಪಠಾಣ್‌ಕೋಟ್ ಸಿವಿಲ್ ಆಸ್ಪತ್ರೆಯದ್ದು ಎಂದು ಹೇಳಲಾಗುತ್ತಿದೆ. ಇದರಲ್ಲಿ ಸಿವಿಲ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಲೇಬರ್ ರೂಂನಲ್ಲಿ ಚಿಕಿತ್ಸೆ ನೀಡದ ಕಾರಣ ಮಹಿಳೆ ಆಸ್ಪತ್ರೆಯ ಹಾಲ್ನ ನೆಲದ ಮೇಲೆಯೇ ಮಗುವಿಗೆ ಜನ್ಮ ನೀಡಿದ್ದಾರೆ.