ಲಕ್ನೋ(ಉತ್ತರ ಪ್ರದೇಶ):28 ವರ್ಷದ ಮಹಿಳೆಯೋರ್ವಳು ಬರೋಬ್ಬರಿ ನಾಲ್ವರು ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆಂದು ಆಸ್ಪತ್ರೆ ಮಾಹಿತಿ ನೀಡಿದೆ.
ನಾಲ್ವರು ಮಕ್ಕಳಿಗೆ ಜನ್ಮ ನೀಡಿದ 28 ವರ್ಷದ ತಾಯಿ! - 4 ಮಕ್ಕಳಿಗೆ ಜನ್ಮ
28 ವರ್ಷದ ತಾಯಿಯೊರ್ವಳು ಒಂದೇ ಬಾರಿ ನಾಲ್ವರು ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ನಡೆದಿದೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
ರಿಹಾನಾ ಎಂಬ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಒಂದು ಹೆಣ್ಣು ಮಗು ಹಾಗೂ ಮೂವರು ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮೂಲಕ ಎಲ್ಲ ಮಕ್ಕಳನ್ನ ಸುರಕ್ಷಿತವಾಗಿ ಹೊರತೆಗೆಯಲಾಗಿದೆ ಎಂದು ವೈದ್ಯೆ ಆಶಾ ಮಿಶ್ರಾ ತಿಳಿಸಿದ್ದಾರೆ. ಮಹಿಳೆ ನಾಲ್ವರು ಮಕ್ಕಳಿಗೆ ಜನ್ಮ ನೀಡುತ್ತಿದ್ದಂತೆ ಮನೆಯಲ್ಲಿ ಸಂಭ್ರಮ ಮತ್ತಷ್ಟು ಹೆಚ್ಚಾಗಿದೆ.
ಹೆರಿಗೆ ನೋವಿನಿಂದ ಬಳಲುತ್ತಿದ್ದ 28 ವರ್ಷದ ರಿಹಾನಾಗೆ ಯಶೋಧಾ ಆಸ್ಪತ್ರೆಗೆ ಭಾನುವಾರ ದಾಖಲು ಮಾಡಲಾಗಿತ್ತು. ನಿನ್ನೆ ರಾತ್ರಿ(ಸೋಮವಾರ) ಮಕ್ಕಳಿಗೆ ಜನ್ಮ ನೀಡಿದ್ದಾಗಿ ವರದಿಯಾಗಿದೆ. ಸದ್ಯ ಎಲ್ಲ ಶಿಶುಗಳು ಸುರಕ್ಷಿತವಾಗಿದ್ದು, ಹೆಚ್ಚಿನ ನಿಗಾ ವಹಿಸುವ ಉದ್ದೇಶದಿಂದ ಆಸ್ಪತ್ರೆಯಲ್ಲೇ ಇಟ್ಟುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.