ಮೈನ್ಪುರಿ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ಮಹಿಳೆಯೊರ್ವಳು ವಿಚಿತ್ರ ಮಗುವೊಂದಕ್ಕೆ ಜನ್ಮ ನೀಡಿದ್ದಾಳೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ತಾಯಿ-ಮಗು ಸುರಕ್ಷಿತವಾಗಿದ್ದಾರೆಂದು ತಿಳಿದು ಬಂದಿದೆ.
ಮೈನ್ಪುರಿ ಜಿಲ್ಲೆಯ ಕಿಶಾನಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಲಾರಿಯಾಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಧರ್ಮೇಂದ್ರನ ಪತ್ನಿಯಾಗಿರುವ ರಾಗಿಣಿ ಮೂರು ತಲೆಯ ಮಗುವಿಗೆ ಜನ್ಮ ನೀಡಿದ್ದಾಳೆ. 9 ತಿಂಗಳ ಗರ್ಭಿಣಿಯಾಗಿದ್ದ ರಾಗಿಣಿಗೆ ನಿನ್ನೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲಿ ಮೂರು ತಲೆಯ ಮಗುವಿಗೆ ಜನ್ಮ ನೀಡಿದ್ದಾಳೆ. ಇಬ್ಬರು ಆರೋಗ್ಯವಾಗಿರುವ ಕಾರಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.