ಸೋಪೋರ್(ಜಮ್ಮು):ಬುರ್ಖಾ ಧರಿಸಿದ್ದ ಮಹಿಳೆಯೋರ್ವಳು ಸಿಆರ್ಪಿಎಫ್ನ ಶಿಬಿರದ ಮೇಲೆ ಬಾಂಬ್ ಎಸೆದು ಪರಾರಿಯಾಗಿರುವ ಘಟನೆ ನಡೆದಿದೆ. ಈ ದುಷ್ಕೃತ್ಯದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಕಳೆದ ಕೆಲ ತಿಂಗಳಲ್ಲಿ ಕಣಿವೆ ನಾಡು ಜಮ್ಮು-ಕಾಶ್ಮೀರದಲ್ಲಿ ಸಿಆರ್ಪಿಎಫ್, ಪೊಲೀಸ್ ಪಡೆ ಮೇಲೆ ಮೇಲಿಂದ ಮೇಲೆ ಗುಂಡಿನ ದಾಳಿ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಖುರ್ಖಾ ಹಾಕಿಕೊಂಡಿದ್ದ ಮಹಿಳೆಯೋರ್ವಳು ಸಿಆರ್ಪಿಎಫ್ನ ಬಂಕ್ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾಳೆ. ಘಟನೆಯಿಂದ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದ್ದು, ಆರೋಪಿಯ ಬಂಧನಕ್ಕೆ ಶೋಧಕಾರ್ಯ ಮುಂದುವರೆದಿದೆ.