ಅಂಬಾಲಾ (ಹರಿಯಾಣ):ಮಹಿಳಾ ಲೆಫ್ಟಿನೆಂಟ್ ಓರ್ವರು ಹರಿಯಾಣದ ಅಂಬಾಲಾ ಕಂಟೋನ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭಾರತೀಯ ವಾಯುಸೇನೆಯಲ್ಲಿ ಕೆಲಸ ಮಾಡುತ್ತಿರುವ, ಸ್ಕ್ವಾಡ್ರನ್ ಲೀಡರ್ ಆಗಿರುವ ಪತಿಯ ಕಿರುಕುಳವೇ ಆಕೆಯ ಸಾವಿಗೆ ಕಾರಣ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ.
ಮೃತಳನ್ನು ಸಾಕ್ಷಿ ಎಂದು ಗುರುತಿಸಲಾಗಿದ್ದು, ಪತಿ ನವನೀತ್ ವರದಕ್ಷಿಣೆಗಾಗಿ ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದರು. ಪ್ರತಿನಿತ್ಯ ಆಕೆಯನ್ನು ದೈಹಿಕವಾಗಿ, ಮಾನಸಿಕವಾಗಿ ಹಿಂಸಿಸುತ್ತಿದ್ದರು ಎಂದು ಮಹಿಳೆಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.