ಕರ್ನಾಟಕ

karnataka

ETV Bharat / bharat

ನೌಕಾಪಡೆಯಲ್ಲಿ ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ ಯುವತಿ ಆತ್ಮಹತ್ಯೆ - etv bharat kannada

Agniveer Trainee Suicide: ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ ಕೇರಳ ಮೂಲದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

woman-navy-agniveer-trainee-suicide-death-in-malad
ನೌಕಾಪಡೆಯಲ್ಲಿ ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ ಯುವತಿ ಆತ್ಮಹತ್ಯೆ

By ETV Bharat Karnataka Team

Published : Nov 28, 2023, 4:39 PM IST

ಮುಂಬೈ(ಮಹಾರಾಷ್ಟ್ರ):ನೌಕಾಪಡೆಯಲ್ಲಿ ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲಾಡ್​ನ ಮಾಲ್ವಾನಿಯಲ್ಲಿ ನಡೆದಿದೆ. ಅಪರ್ಣಾ ನಾಯರ್(20) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ಮಾಲ್ವಾನಿ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

"ಮೃತ ಯುವತಿ ಐಎನ್‌ಎಸ್ ಹಮ್ಲಾದ ಅಗ್ನಿಶಾಮಕ ದಳದಲ್ಲಿ ತರಬೇತಿ ಪಡೆಯುತ್ತಿದ್ದರು. ಯುವತಿಯ ಆತ್ಮಹತ್ಯೆ ಸಂಬಂಧ ಮಾಲ್ವಾನಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ" ಎಂದು ಉಪ ಪೊಲೀಸ್ ಆಯುಕ್ತ ರಾಜ್ ತಿಲಕ್ ರೌಷನ್ ತಿಳಿಸಿದ್ದಾರೆ.

ಆತ್ಮಹತ್ಯೆಗೆ ಪ್ರೇಮ ಪ್ರಕರಣ ಕಾರಣವೆಂಬ ಶಂಕೆ: ಪೊಲೀಸ್ ಮೂಲಗಳ ಪ್ರಕಾರ, ಪ್ರೇಮ ಪ್ರಕರಣ ಸಂಬಂಧ ಯುವತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್ ಚಿಮಾಜಿ ಅಧವ್ ಪ್ರತಿಕ್ರಿಯಿಸಿ, "ಅಗ್ನಿವೀರ್‌ ತರಬೇತಿಗಾಗಿ ಬಂದಿದ್ದ ಯುವತಿ ಕೇರಳ ಮೂಲದವರಾಗಿದ್ದಾರೆ. ಹದಿನೈದು ದಿನಗಳ ಹಿಂದೆ ಐಎನ್‌ಎಸ್ ಹಮ್ಲಾಕ್ಕೆ ತರಬೇತಿಗಾಗಿ ಬಂದಿದ್ದರು" ಎಂದು ಮಾಹಿತಿ ನೀಡಿದ್ದಾರೆ.

ಮಾಲ್ವಾನಿ ಪೊಲೀಸರು ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಯುವತಿಯ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುತ್ತದೆ.

ಇದನ್ನೂ ಓದಿ:ಕಾಲೇಜಿಗೆ ಹೋಗೋದು ಬೇಡ ಎಂದ ತಾಯಿ: ಮನನೊಂದು 20 ವರ್ಷದ ಯುವತಿ ಆತ್ಮಹತ್ಯೆ

ಇತ್ತೀಚಿನ ಘಟನೆ- ವಿದ್ಯಾರ್ಥಿನಿ ಆತ್ಮಹತ್ಯೆ (ದಕ್ಷಿಣ ಕನ್ನಡ):ಇತ್ತೀಚಿಗೆ, ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರದಲ್ಲಿ ಖಿನ್ನತೆಗೊಳಗಾಗಿ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿತ್ತು. ವಿದ್ಯಾರ್ಥಿನಿ ನಿಶಾ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ರನ್ನಿಂಗ್ ರೇಸ್​ ಸ್ಪರ್ಧೆಯಲ್ಲಿ ನಿಶಾ ಭಾಗವಹಿಸಿದ್ದರು. ರನ್ನಿಂಗ್ ರೇಸ್‌ನಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ನಿಶಾ ಅವರು ಬಳಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಶಾ ತೀವ್ರ ವಾಂತಿ ಮಾಡಿಕೊಳ್ಳುತ್ತಿದ್ದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಗೊತ್ತಾಗಿತ್ತು.

ಕೂಡಲೇ ನಿಶಾಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ತಪಾಸಣೆಗಾಗಿ ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ಯುವಂತೆ ವೈದ್ಯರು ಶಿಫಾರಸು ಮಾಡಿದ್ದರು. ವೈದ್ಯರ ಸೂಚನೆ ಮೇರೆಗೆ ನಿಶಾಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕಳೆದ ಒಂದು ವಾರದಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದರು.

ABOUT THE AUTHOR

...view details