ಗುರುಗ್ರಾಮ :ನಗರದಲ್ಲಿ ಹೀನ ಕೃತ್ಯವೊಂದು ಬೆಳಕಿಗೆ ಬಂದಿದೆ. ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಬಳಿಕ ಆಕೆಗೆ ಚಾಕುವಿನಿಂದ ಇರಿದು ಆರೋಪಿಗಳಿಬ್ಬರು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಗಂಭೀರ ಸ್ಥಿತಿಯಲ್ಲಿದ್ದ ಸಂತ್ರಸ್ತೆಯನ್ನು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಬ್ಬರಿಂದ ಅತ್ಯಾಚಾರ :ಸೋಮವಾರ ಪತಿ ಕೆಲಸಕ್ಕೆಂದು ಹೋಗಿದ್ದು, 24 ವರ್ಷದ ಮಹಿಳೆ ಮನೆಯಲ್ಲಿ ಒಂಟಿಯಾಗಿದ್ದಳು. ಒಂಟಿಯಾಗಿದ್ದ ಮಹಿಳೆ ಮನೆಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಆಕೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಂಭೀರ ಸ್ಥಿತಿಯಲ್ಲೂ ಮಹಿಳೆ ತನ್ನ ಪತಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ.
ಮನೆಗೆ ಬಂದ ಪತಿ :ಇಬ್ಬರು ಪುರುಷರು ನನ್ನ ಮೇಲೆ ಅತ್ಯಾಚಾರ ಎಸಗಿ, ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ಮಹಿಳೆ ತನ್ನ ಪತಿಗೆ ಹೇಳಿದ್ದಾರೆ. ಪತಿ ಕೂಡಲೇ ತನ್ನ ಹೆಂಡ್ತಿಯನ್ನು ಗುರುಗ್ರಾಮ್‌ನ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಮಹಿಳೆಯ ಗಂಭೀರ ಸ್ಥಿತಿಯನ್ನು ಕಂಡ ವೈದ್ಯರು ಆಕೆಯನ್ನು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಕಳುಹಿಸಿದರು.