ಬೆರ್ಹಾಂಪುರ್(ಒಡಿಶಾ):ತನ್ನೊಡನೆ ವಾಸಿಸುತ್ತಿದ್ದ 24 ವರ್ಷದ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಜೊತೆ ಜಗಳ ಮಾಡಿರುವ ಸಾಫ್ಟ್ವೇರ್ ಎಂಜಿನಿಯರ್ ಒಬ್ಬ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಒಡಿಶಾದ ಪ್ರತಾಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕಳೆದ ಕೆಲವು ತಿಂಗಳಿಂದ ಈ ಯುವತಿ ಹಾಗೂ ವೃತ್ತಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದ ಯುವಕನ ಜೊತೆ ವಾಸಿಸುತ್ತಿದ್ದರು. ಇಬ್ಬರ ನಡುವೆ ದೈಹಿಕ ಸಂಪರ್ಕವೂ ಇತ್ತು ಎಂದು ತಿಳಿದು ಬಂದಿದೆ. ಕಳೆದ ರಾತ್ರಿ ಯಾವುದೋ ವಿಷಯಕ್ಕೆ ಜಗಳವಾಗಿದ್ದು, ಯುವಕ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ದೇಹದ ಶೇ. 90ರಷ್ಟು ಭಾಗ ಗಾಯಗೊಂಡಿದ್ದ ಯುವತಿಯನ್ನು ತಕ್ಷಣವೇ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದೆ. ಆದರೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ಬೆರ್ಹಾಂಪುರ್ನಲ್ಲಿರುವ MKCG ವೈದ್ಯಕೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
ಘಟನೆಯಲ್ಲಿ ಮೃತಪಟ್ಟ ಯುವತಿ ಹಾಗೂ ಆರೋಪಿ ಇದನ್ನೂ ಓದಿ: ಆಟವಾಡುವ ವೇಳೆ 3 ಬಟನ್ ಶೆಲ್ ನುಂಗಿದ ಬಾಲಕ: ಯಶಸ್ವಿ ಚಿಕಿತ್ಸೆ ಮೂಲಕ ಹೊರ ತೆಗೆದ ವೈದ್ಯರು
ಮಹಿಳೆ ಸಾವನ್ನಪ್ಪುವುದಕ್ಕೂ ಮುಂಚಿತವಾಗಿ ಪೊಲೀಸರ ಮುಂದೆ ತನ್ನ ಹೇಳಿಕೆ ದಾಖಲಿಸಿದ್ದಾಳೆ. ತಾನು ಆತನೊಂದಿಗೆ ಉಳಿದುಕೊಂಡು ಜೀವನ ನಡೆಸುತ್ತಿದ್ದುದಾಗಿ ತಿಳಿಸಿದ್ದಾಳೆ. ಇದಕ್ಕೆ ಸಂಬಂಧಿಸಿದಂತೆ ಬೆರ್ಹಾಂಪುರ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಸೂರ್ಯಮಣಿ ಪ್ರಧಾನ್ ಮಾಹಿತಿ ನೀಡಿದ್ದಾರೆ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿದ ನಂತರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.