ಬರೇಲಿ( ಉತ್ತರಪ್ರದೇಶ): ಉತ್ತರಪ್ರದೇಶದ ಬರೇಲಿ ಜಿಲ್ಲೆಯಲ್ಲಿ ವರದಕ್ಷಿಣೆಗಾಗಿ 24 ವರ್ಷದ ಮಹಿಳೆಯನ್ನು ಅವಳ ಅತ್ತೆಯೇ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ತೀವ್ರವಾಗಿ ಗಾಯಗೊಂಡ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಪತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಸಂತ್ರಸ್ತೆಯ ಪತಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಬರೇಲಿ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಭಾಟಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸಂತ್ರಸ್ತೆಯ ತಂದೆ ದಿನೇಶ್ ಕುಮಾರ್ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದರು. ಆಕಾಂಕ್ಷಾ ಆಕೆಯ ಪತಿ ಅಶೋಕ್ ಮತ್ತು ಅವರ ಕುಟುಂಬ ಸದಸ್ಯರು ವರದಕ್ಷಿಣೆಗಾಗಿ ಪದೇ ಪದೇ ಕಿರುಕುಳ ನೀಡುತ್ತಿದ್ದರು ಮತ್ತು ಹಲ್ಲೆ ನಡೆಸುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆಕಾಂಕ್ಷಾ 2019 ರ ನವೆಂಬರ್‌ನಲ್ಲಿ ಅಶೋಕ್ ಎಂಬುವವರನ್ನು ವಿವಾಹವಾಗಿದ್ದರು. "ಭಾನುವಾರ ಅತ್ತೆ ಶಾಂತಿ, ಸೋದರ ಮಾವ ಪ್ರದೀಪ್ ಮತ್ತು ಸೊಸೆ ಗೀತಾ, ಆಕಾಂಕ್ಷಾಗೆ ಬೆಂಕಿ ಹಚ್ಚಿದ್ದರು, ಇದರಿಂದ ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಬಳಿಕ ನಾಪತ್ತೆಯಾಗಿದ್ದಾರೆ. ಅತ್ತ ಚಿಕಿತ್ಸೆ ಫಲಕಾರಿಯಾಗದೇ ಆಕಾಂಕ್ಷಾ ಮೃತಪಟ್ಟಿದ್ದಾಳೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.