ನವದೆಹಲಿ: ಇಲ್ಲಿನ ಶಕುರ್ ಬಸ್ತಿ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಕುಳಿತಿದ್ದ 22 ವರ್ಷದ ಯುವತಿಯನ್ನು ಎಳೆದೊಯ್ದು ಮೂವರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಗುರುವಾರ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಗಳನ್ನು ಬಂಧಿಸಲು ಪೊಲೀಸರು ತಂಡಗಳನ್ನು ರಚಿಸಿದ್ದಾರೆ.
ರೈಲು ನಿಲ್ದಾಣದ ಬಳಿ ವಾಸಿಸುವ ಸಂತ್ರಸ್ತೆಯು, ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಜಗಳವಾದ ಕಾರಣ ಮುನಿಸಿಕೊಂಡು ಬಂದು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಕುಳಿತಿದ್ದಳು. ಈ ವೇಳೆ ಮೂವರು ಕಾಮುಕರು ಯುವತಿಯನ್ನು ಎಳೆದೊಯ್ದು ಆಕೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ. ಬಳಿಕ ಈ ವಿಚಾರವನ್ನು ತಿಳಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.