ಪುರುಲಿಯಾ(ಪಶ್ಚಿಮ ಬಂಗಾಳ): ತಾಯಿಯೊಬ್ಬಳು ಏಳು ದಿನಗಳವರೆಗೆ ಮನೆಯಲ್ಲೇ ಮಗನ ಶವವನ್ನು ಇರಿಸಿಕೊಂಡಿದ್ದ ವಿಚಿತ್ರ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದ್ದು, ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಮನಗಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಪುರುಲಿಯಾದ ಶ್ಯಾಂಪುರ್ ಗ್ರಾಮದಲ್ಲಿ ತನ್ನ ಏಕೈಕ ಮಗ ಸಂಜಯ್ ದಾಸ್ (38) ಎಂಬಾತನ ಶವವನ್ನು ತಾಯಿಯು ಏಳು ದಿನಗಳ ಕಾಲ ಮನೆಯಲ್ಲೇ ಇಟ್ಟುಕೊಂಡಿದ್ದಳು. ಬುಧವಾರ ರಾತ್ರಿ ಘಟನೆ ಬೆಳಕಿಗೆ ಬಂದಿದೆ. ಅಕ್ಕಪಕ್ಕದ ಮನೆಯವರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.