ಗ್ವಾಲಿಯರ್:ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಚಂಬಲ್ ಪ್ರದೇಶದಲ್ಲಿ ಬಂದೂಕಿನ ಗುಂಡಿನ ಸದ್ದು ಜೋರಾಗುತ್ತಿವೆ. ಮದುವೆ ಸಮಾರಂಭದಲ್ಲಿ ಮಹಿಳೆಯೊಬ್ಬರು ಸರಣಿಯಾಗಿ ಗುಂಡು ಹಾರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಚಂಬಲ್ ಪ್ರದೇಶದಲ್ಲಿ ಇತ್ತೀಚೆಗೆ ಮದುವೆ ಸಮಾರಂಭದಲ್ಲಿ ಸಂತೋಷದ ಪ್ರತೀಕವಾಗಿ ಗುಂಡು ಹಾರಿಸುವುದು ಹೆಚ್ಚಾಗಿದೆ. ಇದೀಗ ಮಹಿಳೆಯೊಬ್ಬರು ಗುಂಡು ಹಾರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಈ ಬಗ್ಗೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.