ಮುಂಬೈ(ಮಹಾರಾಷ್ಟ್ರ):ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಕಾಮುಕನೋರ್ವ ಆಕೆಯ ಗುಪ್ತಾಂಗಕ್ಕೆ ರಾಡ್ ಹಾಕಿ ಅಮಾನವೀಯತೆ ಮೆರೆದಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ. ಸದ್ಯ ಸಂತ್ರಸ್ತೆಯ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. 32 ವರ್ಷದ ಮಹಿಳೆ ಅತ್ಯಾಚಾರಕ್ಕೆ ಒಳಗಾಗಿದ್ದಾಳೆ. ಅತ್ಯಾಚಾರ ಎಸಗಿದ ಕಾಮುಕ ಆಕೆಯ ಖಾಸಗಿ ಭಾಗದಲ್ಲಿ ರಾಡ್ ತುರುಕಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.