ಕಡಲೂರು(ತಮಿಳುನಾಡು):ಗಂಡನ ಮನೆಯಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ ಎಂಬ ಕಾರಣಕ್ಕೆ ಮನನೊಂದು ನವವಿವಾಹಿತೆಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಖಾಸಗಿ ಆಸ್ಪತ್ರೆವೊಂದರಲ್ಲಿ ಕೆಲಸ ಮಾಡ್ತಿದ್ದ ರಮ್ಯಾ(27) ಕಾರ್ತಿಕೇಯನ್ ಎಂಬಾತನೊಂದಿಗೆ ಪ್ರೇಮ ಸಂಬಂಧ ಹೊಂದಿದ್ದಳು. ಇವರಿಬ್ಬರ ಮದುವೆ ಏಪ್ರಿಲ್ 6ರಂದು ನಡೆದಿತ್ತು. ಕಾರ್ತಿಕೇಯನ್ ಮನೆಯಲ್ಲಿ ಶೌಚಾಲಯ ಇರಲಿಲ್ಲ. ಹೀಗಾಗಿ, ಏಪ್ರಿಲ್ 7ರಂದು ರಮ್ಯಾ ಮರಳಿ ತವರು ಮನೆಗೆ ಹೋಗಿದ್ದರು. ಇಷ್ಟಾದರೂ ಕಾರ್ತಿಕೇಯನ್ ಮನೆಯಲ್ಲಿ ಶೌಚಾಲಯ ನಿರ್ಮಾಣ ಮಾಡಿಲ್ಲ. ಇದೇ ವಿಚಾರವಾಗಿ ಗಂಡ - ಹೆಂಡತಿ ನಡುವೆ ತೀವ್ರ ವಾಗ್ವಾದ ನಡೆದಿದ್ದು, ರಮ್ಯಾಳನ್ನ ಕೆಟ್ಟದಾಗಿ ನಿಂದಿಸಿದ್ದಾನೆ.