ಕರ್ನಾಟಕ

karnataka

ETV Bharat / bharat

ಉತ್ತರ ಪ್ರದೇಶದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಪ್ರಿಯಾಂಕಾ ಗಾಂಧಿ - ಉತ್ತರ ಪ್ರದೇಶದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ

ಉತ್ತರ ಪ್ರದೇಶದಲ್ಲಿ ಮಹಿಳೆಯರು ಅಸುರಕ್ಷಿತರಾಗಿದ್ದಾರೆ. ರಸ್ತೆ ಅಥವಾ ಇನ್ನಾವುದೇ ಸ್ಥಳಗಳಲ್ಲಿ ಸ್ವಾತಂತ್ರ್ಯವಾಗಿ ಓಡಾಟಲು ರಕ್ಷಣೆ ಇಲ್ಲದಂತಾಗಿದೆ. ಇದು ರಾಜ್ಯದ ವಾಸ್ತವ ಸ್ಥಿತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Priyanka Gandhi
ಪ್ರಿಯಾಂಕಾ ಗಾಂಧಿ

By

Published : Nov 11, 2021, 2:59 PM IST

ನವದೆಹಲಿ: ಮಹಿಳೆಯರ ಸುರಕ್ಷತೆ ವಿಚಾರವಾಗಿ ಉತ್ತರ ಪ್ರದೇಶ ಸರ್ಕಾರದ (Uttar Pradesh Government) ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವಾಗಿದೆ ಎಂದು ಆರೋಪಿಸಿದರು.

ಲಖನೌದಲ್ಲಿರುವ ಬಾಪು ಭವನದಲ್ಲಿ (Bapu Bhavan) ಗುತ್ತಿಗೆದಾರ ಸಿಬ್ಬಂದಿಯೊಬ್ಬರಿಗೆ ಕಿರುಕುಳ ನೀಡಿದ್ದ ಆರೋಪದಡಿ ಅಧಿಕಾರಿಯೊಬ್ಬರನ್ನು ಬಂಧಿಸಿರುವ ವರದಿ ಉಲ್ಲೇಖಿಸಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು. ಈ ಅಧಿಕಾರಿಯು ಕಿರುಕುಳ ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಈ ಕುರಿತು ಟ್ವೀಟ್​ ಮಾಡಿರುವ ಪ್ರಿಯಾಂಕಾ ಗಾಂಧಿ, ಉತ್ತರ ಪ್ರದೇಶದಲ್ಲಿ ಮಹಿಳೆಯರು ಅಸುರಕ್ಷಿತರಾಗಿದ್ದಾರೆ. ರಸ್ತೆ ಅಥವಾ ಇನ್ನಾವುದೇ ಸ್ಥಳಗಳಲ್ಲಿ ಮಹಿಳೆಯರು ಸ್ವಾತಂತ್ರ್ಯವಾಗಿ ಓಡಾಟಲು ರಕ್ಷಣೆ ಇಲ್ಲದಂತಾಗಿದೆ. ಇದು ರಾಜ್ಯದ ವಾಸ್ತವ ಸ್ಥಿತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

'ರಾಜ್ಯದ ಮಹಿಳೆಯರು ಎಲ್ಲರೂ ಒಗ್ಗೂಡಬೇಕು. ನಿಮಗಾಗುತ್ತಿರುವ ಆನ್ಯಾಯದ ವಿರುದ್ಧ ಹೋರಾಡಬೇಕು ಎಂದು ಒತ್ತಾಯಿಸುವುದರ ಜೊತೆಗೆ ದೇಶದ ಮಹಿಳೆಯರೆಲ್ಲರೂ ನಿಮ್ಮೊಂದಿಗೆ ನಿಂತಿದ್ದಾರೆ' ಎಂದು ಸಂತ್ರಸ್ತೆಗೆ ಟ್ವೀಟ್​ನಲ್ಲಿ​ ಭರವಸೆ ನೀಡಿದ್ದಾರೆ.

ಇನ್ನು ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಮಹಿಳೆಯರ ಸುರಕ್ಷತೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಗಾಗ ವಾಗ್ದಾಳಿ ನಡೆಸುತ್ತಿರುತ್ತದೆ. ರಾಜ್ಯದಲ್ಲಿ ಅಪರಾಧ ಚಟುವಟಿಕೆಗಳು ಮಿತಿಮೀರಿವೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿದ್ದರೂ ಸಹ ಯೋಗಿ ಆದಿತ್ಯನಾಥ್ ಸರ್ಕಾರ ಮಾತ್ರ ಈ ಆರೋಪವನ್ನು ತಳ್ಳಿಹಾಕಿದೆ.

ABOUT THE AUTHOR

...view details