ಶ್ರೀಕಾಳಹಸ್ತಿ(ಆಂಧ್ರಪ್ರದೇಶ):ಮಹಿಳಾ ಸ್ವಯಂ ಸೇವಕಿಯಾಗಿ ಕೆಲಸ ಮಾಡ್ತಿದ್ದ 23 ವರ್ಷದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಳಹಸ್ತಿಯಲ್ಲಿ ನಡೆದಿದೆ. ಪೊಲೀಸ್ ಕಾನ್ಸ್ಟೇಬಲ್ ಒಬ್ಬರ ಅನುಚಿತ ವರ್ತನೆಯಿಂದಾಗಿ ಈ ನಿರ್ಧಾರ ಕೈಗೊಂಡಿದ್ದಾಳೆಂಬ ಆರೋಪ ಕೇಳಿ ಬಂದಿದೆ.
ಚಿತ್ತೂರು ಜಿಲ್ಲೆಯ ಶ್ರೀಕಾಳಹಸ್ತಿಯಲ್ಲಿ ಸ್ವಯಂಸೇವಕಿಯಾಗಿದ್ದ ಉಮಾಮಹೇಶ್ವರಿ(23) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು, ಪೊಲೀಸ್ ಕಾನ್ಸ್ಟೇಬಲ್ ಅನುಚಿತ ವರ್ತನೆಯಿಂದಾಗಿ ತಮ್ಮ ಮಗಳು ಈ ನಿರ್ಧಾರ ಕೈಗೊಂಡಿದ್ದಾಳೆಂದು ಕುಟುಂಬಸ್ಥರು ದೂರು ನೀಡಿದ್ದಾರೆ.
ಪೊಲೀಸ್ ಕಾನ್ಸ್ಟೇಬಲ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ಉಮಾಮಹೇಶ್ವರಿ ಸಾವಿಗೆ ಕಾರಣವಾಗಿರುವ ಕಾನ್ಸ್ಟೇಬಲ್ನನ್ನ ಈ ಕೂಡಲೇ ವಜಾಗೊಳಿಸುವಂತೆ ಸ್ಥಳೀಯರು ಪ್ರತಿಭಟನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.