ಹೈದರಾಬಾದ್: ಕಳೆದ ವರ್ಷ ಚೀನಾದಲ್ಲಿ ಮೊದಲು ಪತ್ತೆಯಾದ ಕೊರೊನಾ ವೈರಸ್ ಇದೀಗ ಜಗತ್ತಿನ 218 ರಾಷ್ಟ್ರಗಳನ್ನು ಆವರಿಸಿದೆ. ಈವರೆಗೆ 7,97,67,036(7.9ಕೋಟಿ) ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದರೆ, ಇವರಲ್ಲಿ 17,49,956(17.49ಲಕ್ಷ) ಮಂದಿ ಬಲಿಯಾಗಿದ್ದಾರೆ. 5,61,56,49(5.61ಕೋಟಿ) ಸೋಂಕಿತರು ಗುಣಮುಖರಾಗಿದ್ದಾರೆ.
ಕೇಸ್ಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ಪ್ರಪಂಚದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 1,91,11,326 ಇದ್ದು, ಮೃತರ ಸಂಖ್ಯೆ 3,37,066ಕ್ಕೆ ಏರಿಕೆಯಾಗಿದೆ. ಅಮೆರಿಕದ ಚುನಾಯಿತ ಅಧ್ಯಕ್ಷ ಜೋ ಬೈಡನ್ ಕೊರೊನಾ ಲಸಿಕೆಯ ಮೊದಲ ಡೋಸ್ ಅನ್ನು ಪಡೆದು, ರಾಷ್ಟ್ರದ ಜನರಲ್ಲಿ ಧೈರ್ಯ ತುಂಬಿದ್ದಾರೆ.
ಇದನ್ನೂ ಓದಿ: ಬ್ರಿಟನ್‌ನಲ್ಲಿ 6 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಲಸಿಕೆ
ಪ್ರಕರಣಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈವರೆಗೆ 1,01,47,468 ಕೇಸ್ಗಳು ಪತ್ತೆಯಾಗಿದ್ದು, 1,47,128 ಜನರು ವೈರಸ್ಗೆ ಬಲಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 74,25,593 ಪ್ರಕರಣಗಳು ಹಾಗೂ 1,90,032 ಸಾವುಗಳು ವರದಿಯಾಗಿದೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 29,63,688 ಕೇಸ್ಗಳಿದ್ದು, 53,096 ಜನರು ಸಾವನ್ನಪ್ಪಿದ್ದಾರೆ.
ಅಮೆರಿಕ, ಬ್ರೆಜಿಲ್, ಭಾರತದ ಬಳಿಕ ಸಾವಿನ ಸಂಖ್ಯೆಯಲ್ಲಿ ಮೆಕ್ಸಿಕೋ, ಇಂಗ್ಲೆಂಡ್ ಹಾಗೂ ಇಟಲಿ ಕ್ರಮವಾಗಿ 4,5 ಹಾಗೂ 6ನೇ ಸ್ಥಾನದಲ್ಲಿವೆ. ಫೈಜರ್ ಹಾಗೂ ಬಯೋಎನ್ಟೆಕ್ ಸಂಸ್ಥೆ ಜಂಟಿಯಾಗಿ ಅಭಿವೃದ್ಧಿಪಡಿಸಿರುವ 'ಫೈಜರ್' ಕೋವಿಡ್ ಲಸಿಕೆಯನ್ನು ಬ್ರಿಟನ್‌ನಲ್ಲಿ ಈವರೆಗೆ ಆರು ಲಕ್ಷಕ್ಕೂ ಹೆಚ್ಚು ಜನರಿಗೆ ನೀಡಲಾಗಿದೆ ಎಂದು ಇಂಗ್ಲೆಂಡ್ ಸರ್ಕಾರ ತಿಳಿಸಿದೆ.