ಛತ್ತೀಸ್ಗಡ:ಶನಿವಾರದಿಂದ ಪ್ರಾರಂಭವಾದ ಭದ್ರತಾ ಪಡೆ ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ ಒಟ್ಟು 22 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದರು. ಇಂದು ಅವರ ಪಾರ್ಥಿವ ಶರೀರಗಳನ್ನು ಬಿಜಾಪುರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆೆ.
ಸುಕ್ಮಾ-ಬಿಜಾಪುರ ಗಡಿಯಲ್ಲಿ ನಕ್ಸಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಸೈನಿಕರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಕೆ ಮಾಡಲಾಗುತ್ತಿದೆ. ಪಾರ್ಥಿವ ಶರೀರದ ಮುಂದೆ, ಕುಟುಂಬಸ್ಥರು ಕಣ್ಣೀರು ಹಾಕುತ್ತಿರುವ ದೃಶ್ಯ ಮನಕಲಕುವಂತಿದೆ.