ಸೋನಿಪತ್: ಹರಿಯಾಣದ ಸೋನಿಪತ್ ಜಿಲ್ಲೆಯಲ್ಲಿ ಕುಸ್ತಿಪಟು ನಿಶಾ ದಹಿಯಾ ಮತ್ತು ಅವರ ಕುಟುಂಬದವರ ಮೇಲೆ ಗುಂಡಿನ ದಾಳಿ ನಡೆದಿದೆ. ದಾಳಿಕೋರರು ಕುಸ್ತಿಪಟು ನಿಶಾ, ಆಕೆಯ ಸಹೋದರನ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ. ಇದೇ ವೇಳೆ ತಾಯಿ ಧನ್‌ಪತಿ ಗಂಭೀರವಾಗಿ ಗಾಯಗೊಂಡಿದ್ದು, ರೋಹ್ಟಕ್‌ನ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹರಿಯಾಣದಲ್ಲಿ ಕುಸ್ತಿಪಟು ನಿಶಾ ದಹಿಯಾ, ಸೋದರನ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು - Sonipat shot case
ಉದಯೋನ್ಮುಖ ಕುಸ್ತಿಪಟು ನಿಶಾ ದಹಿಯಾ ಹಾಗೂ ಅವರ ಸಹೋದರನ ಮೇಲೆ ಗುಂಡಿನ ದಾಳಿ ನಡೆದಿದೆ. ಸುಶೀಲ್ ಕುಮಾರ್ ರೆಸ್ಲಿಂಗ್ ಅಕಾಡೆಮಿ ಬಳಿ ದುಷ್ಕರ್ಮಿಗಳು ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ರಾಷ್ಟ್ರೀಯ ಕುಸ್ತಿಪಟು ನಿಶಾ ದಹಿಯಾ
ಈ ಘಟನೆಯ ಬಳಿಕ ಸೋನಿಪತ್‌ನ ಹಲಾಲ್‌ಪುರ ಗ್ರಾಮದಲ್ಲಿ ಕುಸ್ತಿಪಟು ಸುಶೀಲ್‌ಕುಮಾರ್ ಹೆಸರಿನ ಅಕಾಡೆಮಿಗೆ ಧಾವಿಸಿದ ಸ್ಥಳೀಯರು ಬೆಂಕಿ ಹಚ್ಚಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋನಿಪತ್‌ನ ಖಾರ್ಖೋಡಾ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ತೀವ್ರಗೊಳಿಸಿದ್ದಾರೆ.